
ಬೆಂಗಳೂರು(ಮೇ.24): ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ವೈ. ಮೇಟಿಗೆ ಸಿಐಡಿ ಅಧಿಕಾರಿಗಳು ಕ್ಲೀನ್ ಚಿಟ್ ನೀಡಿದ್ದಾರೆ.
ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಅಸಲು ವಿಡಿಯೋ ದೊರಕದ ಕಾರಣ ವಿಚಾರಣೆಯನ್ನು ಸಮರ್ಪಕವಾಗಿ ನಡೆಸುವಲ್ಲಿ ಸಾಧ್ಯವಾಗಿಲ್ಲ. ಜೊತೆಗೆ ಮೇಟಿ ಅವರಿಗೆ ಸಂಬಂಧಿಸಿದೆ ಎನ್ನಲಾದ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ವಿಚಾರಣೆ ನಡೆಸಿದಾಗ ಮಾಧ್ಯಮಗಳು ಸಹಕಾರ ನೀಡಿಲ್ಲ. ಹಾಗೂ ದೃಶ್ಯಗಳ ವಿವರವನ್ನು ನೀಡಲು ಮಾಧ್ಯಮಗಳು ನಿರಾಕರಿಸಿವೆ. ಇದುವರೆಗೂ ಯಾವುದೇ ಮಹಿಳೆ ಮೇಟಿಯವರು ನನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆಂದು ದೂರು ನೀಡಿಲ್ಲ. ಅಲ್ಲದೇ ಇದು ನೈಜವಾದ ಸಿಡಿಯಲ್ಲ. ದೃಶ್ಯಗಳನ್ನ ಎಡಿಟ್ ಮಾಡಿ ಮಾಧ್ಯಮಗಳು ಪ್ರಸಾರ ಮಾಡಿವೆ. ಮೇಟಿಯವರ ವೈಯಕ್ತಿಕ ವರ್ಚಸ್ಸಿಗೆ ಧಕ್ಕೆ ತರುವ ನಿಟ್ಟಿನಲ್ಲಿ ಈ ಸಿಡಿ ರೂಪಿಸಲಾಗಿದೆ ಎಂದು ಸರ್ಕಾರಕ್ಕೆ ವರದಿ ಸಲ್ಲಿದೆ. ಇನ್ನೂ ಸಿಐಡಿ ಕ್ಲೀನ್ ಚಿಟ್ ನೀಡಿದ್ದಕ್ಕೆ ಮೇಟಿ ಸಂತಸ ವ್ಯಕ್ತಪಡಿಸಿದ್ದಾರೆ. ಮತ್ತೆ ಸಚಿವ ಸ್ಥಾನ ನೀಡಿದರೆ ಪ್ರಾಮಾಣಿಕವಾಗಿ ಕೆಲಸ ಮಾಡ್ತೇನೆ ಅಂತಾ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.