ಮಾಜಿ ಸಚಿವ ರಮಾನಾಥ್ ರೈಗೆ ಅಧ್ಯಕ್ಷ ಹುದ್ದೆ?

First Published Jun 1, 2018, 12:31 PM IST
Highlights

ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ಸಚಿವರು ಅನೇಕರು ಸೋತಿದ್ದಾರೆ. ಆದರೆ, ಮತ್ತೆ ಬೇರೆ ಬೇರೆ ರೀತಿಯಲ್ಲಿ ಒಂದಲ್ಲ ಒಂದು ಅಧಿಕಾರ ಹಿಡಿಯಲು ಸಕಲ ರೀತಿಯಲ್ಲಿಯೂ ಯತ್ನಿಸುತ್ತಿದ್ದಾರೆ. ಮಾಜಿ ಸಚಿವ ರಮಾನಾಥ್ ರೈ ಸಹ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದು, ಎಲ್ಲಿಯ ಅಧ್ಯಕ್ಷ ಸ್ಥಾನ, ಎಂಬುವುದನ್ನು ಓದಿ.....

ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ಅನೇಕ ಸಚಿವರು ಸೋತು, ಇದೀಗ ಮನೆಯಲ್ಲಿದ್ದಾರೆ. ಅವರಲ್ಲಿ ಅನೇಕರು ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಗೆ ಈಗಲೇ ಲಾಬಿ ನಡೆಸಲು ಆರಂಭಿಸಿದ್ದಾರೆ. ಮತ್ತೆ ಕೆಲವರು ಈ ತಿಂಗಳು ನಡೆಯುವ ವಿಧಾನ ಪರಿಷತ್ ಸದಸ್ಯ ಸ್ಥಾನಗಳಿಗೂ ಯತ್ನಿಸಿ, ಸೋತಿಸಿದ್ದಾರೆ. 

ವಿಧಾನ ಪರಿಷತ್ ಸ್ಥಾನಕ್ಕೆ ಯತ್ನಿಸಿದ ಮಾಜಿ ಸಚಿವ ರಮಾನಾಥ್ ರೈ ಅವರಿಗೆ ವರಿಷ್ಠರು ಮಣೆ ಹಾಕಲೇ ಇಲ್ಲ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಹರೀಶ್ ಕುಮಾರ್ ಅವರಿಗೆ ಎಂಎಲ್‌ಸಿ ಟಿಕೆಟ್ ಸಿಕ್ಕಿದೆ. ತೆರವಾಗಿರುವ ಸ್ಥಾನಕ್ಕೆ ರೈ ಆಯ್ಕೆಯಾಗುವ ಸಾಧ್ಯತೆ ಇದೆ.

ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಸೋತಿರುವ ರಮಾನಾಥ್ ರೈ ಅವರು ಮುಂದಿನ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯೂ ಹೌದು.
 

click me!