
ಮೈಸೂರು(ಸೆ.07): ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನ ಖಂಡಿಸಿ ಹೋರಾಟ ತೀವ್ರಗೊಳ್ಳುತ್ತಿದೆ. ಮಾಜಿ ಸಂಸದ ಎಚ್. ವಿಶ್ವನಾಥ್ ಅವರು ಸಿಎಂಗೆ ಪತ್ರ ಬರೆದು ಮಾನ ಮರ್ಯಾದೆ ಇದ್ದರೆ ಕುರ್ಚಿಯಿಂದ ಕೆಲಗಿಳಿಯಿರಿ ಎಂದು ಆಗ್ರಹಿಸಿದ್ದಾರೆ.
ಕೋರ್ಟ್ಗೆ ವಸ್ತುಸ್ಥಿತಿ ವಿವರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಅಧಿಕಾರದ ಆಸೆ ಬಿಟ್ಟು ಸಿಎಂ ಕುರ್ಚಿಯಿಂದ ಕೆಳಗಿಳಿಯಿರಿ, ಜೈಲಿಗೆ ಅಟ್ಟಿದರೂ ಜೈಲಿಗೆ ಹೋಗಲು ಸಿದ್ಧ ಎಂಬ ನಿರ್ಧಾರ ಕೈಗೊಳ್ಳಿ ಎಂದು ಆಗ್ರಹಿಸಿದ್ಧಾರೆ.
ಇದೇವೇಳೆ, ಸಿಎಂ, ನೀರಾವರಿ ಸಚಿವರು ಉಡಾಫೆಯಿಂದ ಮಾತನಾಡುವುದನ್ನು ಬಿಡಲಿ. ಸಿಎಂ ಸಿದ್ದರಾಮಯ್ಯ, ಕಾವೇರಿ ನೀರು ಕುಡಿದು ಬೆಳೆದವರು. ಜನರು ದಂಗೆ ಏಳುವ ಮುನ್ನ ಸಿಎಂ ಸ್ಪಷ್ಟ ನಿಲುವು ತೆಗೆದುಕೊಳ್ಳಬೇಕು. ಕೂಡಲೇ ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸಬೇಕು. ಇಲ್ಲವಾದರೆ ಮರ್ಯಾದೆಯಿಂದ ರಾಜೀನಾಮೆ ಕೊಟ್ಟು ಹೋಗಲಿ ಎಂದು ಪತ್ರದಲ್ಲಿ ಸಿಎಂ ವಿರುದ್ಧ ಎಚ್.ವಿಶ್ವನಾಥ್ ಕೆಂಡಕಾರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.