
ನವದೆಹಲಿ : ನ್ಯಾಷನಲ್ ಕಾಂಗ್ರೆಸ್ ಪಕ್ಷವನ್ನು ತೊರೆದ ಒಂದು ತಿಂಗಳ ಬಳಿಕ ಇದೀಗ ತಾರಿಕ್ ಅನ್ವರ್ ಶನಿವಾರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ ಬಳಿಕ ಅವರು ಪಕ್ಷವನ್ನು ಸೇರಿದ್ದಾರೆ ಎನ್ನಲಾಗಿದೆ.
ಅನ್ವರ್ ಹಾಗೂ ಅವರ ಬೆಂಬಲಿಗರು ತುಘಲಕ್ ಬೀದಿಯ ನಿವಾಸದಲ್ಲಿ ರಾಹುಲ್ ಗಾಂಧಿ ಭೇಟಿ ಮಾಡಿದ್ದು ಈ ವೇಳೆ ಪಕ್ಷಕ್ಕೆ ಅವರನ್ನು ಸ್ವಾಗತಿಸಲಾಗಿದೆ.
ಮಾಜಿ ಸಂಸದ ಅನ್ವರ್ ಕಳೆದ ಕೆಲ ದಿನಗಳ ಹಿಂದೆಯೇ ಕಾಂಗ್ರೆಸ್ ಸೇರ್ಪಡೆಯ ಬಗ್ಗೆ ಹೇಳಿದ್ದರು. ಶರದ್ ಪವಾರ್ ಅವರು ರಫೇಲ್ ಡೀಲ್ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿ ಮಾತನಾಡಿದ್ದಕ್ಕೆ ಅಸಮಧಾನ ವ್ಯಕ್ತಪಡಿಸಿದ್ದ ಅವರು ಎನ್ ಸಿ ಪಿಗೆ ಗುಡ್ ಬೈ ಹೇಳಿದ್ದರು.
ಇದೀಗ ಹಲವು ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿರುವ ಹೊಸ್ತಿಲಲ್ಲೇ ಕಾಂಗ್ರೆಸ್ ಗೆ ಸೇರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ