ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಇನ್ನಿಲ್ಲ

By Web DeskFirst Published Aug 6, 2019, 11:15 PM IST
Highlights

ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.

ನವದೆಹಲಿ[ಆ. 06]   ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್  ಹೊರಗೆ ಉಳಿದಿದ್ದರು.

1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ  67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು.

ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ ಬಳ್ಳಾರಿಯಿಂದ 1999 ರಲ್ಲಿ ಲೋಕಸಭೆಗೆ ಸ್ಪರ್ಧೆ ಮಾಡಿದ್ದರು. ಸುಷ್ಮಾ ಸ್ವರಾಜ್ ಮತ್ತು ಸೋನಿಯಾ ಗಾಂಧಿ ನಡುವಿನ ರಾಜಕೀಯ ಸಮರ ಇಡೀ ದೇಶದ ಗಮನ ಸೆಳೆದಿತ್ತು. 

ಸುಷ್ಮಾ ಸ್ವರಾಜ್ ಭಾರತೀಯ ರಾಜಕಾರಣಿ. ಭಾರತದ ಸರ್ವೋಚ್ಚ ನ್ಯಾಯಾಲಯದ ಮಾಜಿ ವಕೀಲೆ. ಇವರು ಸಂಸದೆಯಾಗಿ ಏಳು ಬಾರಿ ಮತ್ತು ವಿಧಾನ ಸಭಾ ಸದಸ್ಯೆಯಾಗಿ ಮೂರು ಬಾರಿ ಆಯ್ಕೆಯಾಗಿದ್ದರು.  1973ರಲ್ಲಿ ಸುಪ್ರೀಂ ಕೋರ್ಟ್ ವಕೀಲೆಯಾಗಿ ಕಾರ್ಯ ಆರಂಭಿಸಿದ್ದರು.

Former External Affairs Minister & senior BJP leader, Sushma Swaraj, passes away. pic.twitter.com/4L59O73xQU

— ANI (@ANI)
click me!