
ಲಾಹೋರ್[ಜು.19]: ಧ್ರವೀಕೃತ ನೈಸರ್ಗಿಕ ಇಂಧನ (ಎಲ್‌ಎನ್‌ಜಿ) ಆಮದು ಒಪ್ಪಂದದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಿ ಶಾಹಿದ್ ಖಕಾನ್ ಅಬ್ಬಾಸಿಯನ್ನು ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ
ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಸಚಿವ ಸಂಪುಟದಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಸಂಪನ್ಮೂಲ ಖಾತೆ ಸಚಿವರಾಗಿದ್ದಾಗ ಖತಾರ್‌ನಿಂದ ನೈಸರ್ಗಿಕ ಇಂಧನ ಪೂರೈಕೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಈ ಒಪ್ಪಂದದಲ್ಲಿ ಬಹುಕೋಟಿ ರುಪಾಯಿ ಹಗರಣ ನಡೆದಿದೆ ಎಂಬ ಆರೋಪದ ಮೇಲೆ ಎನ್‌ಎಬಿ ತನಿಖೆ ನಡೆಸುತ್ತಿದೆ.
ಅಬ್ಬಾಸಿ ಬಂಧನವನ್ನು ವಿಪಕ್ಷಗಳು ಖಂಡಿಸಿವೆ. ಶಾಹಿದ್ ಅಬ್ಬಾಸಿ 2017-2018 ರಲ್ಲಿ ಪಾಕಿಸ್ತಾನದ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.