ಮಾಜಿ ಪ್ರಧಾನಿ ದೇವೇಗೌಡರಿಗೆ ಒಲಿದು ಬಂತು ಪ್ರತಿಷ್ಠಿತ ಪ್ರಶಸ್ತಿ

By Web DeskFirst Published Oct 23, 2018, 11:35 AM IST
Highlights

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ತಂದೆಗೆ ಮಗನಿಂದಲೇ ಪ್ರಶಸ್ತಿ ಪ್ರದಾನ.

ಬೆಂಗಳೂರು, [ಅ.23]: ರಾಜ್ಯ ಸರ್ಕಾರದ ಪ್ರತಿಷ್ಠಿತ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರನ್ನು ಆಯ್ಕೆ ಮಾಡಿದೆ.

ವಾಲ್ಮೀಕಿ ಪ್ರಶಸ್ತಿ ಆಯ್ಜೆಗೆ ರಾಜ್ಯ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಸರ್ಕಾರ ಸಮತಿ ನೇಮಿಸಿತ್ತು.

ವಾಲ್ಮೀಕಿ ಪ್ರಶಸ್ತಿ ಆಯ್ಕೆ ಸಮಿತಿ ಶಿಫಾರಿಸಿನಂತೆ ರಾಜ್ಯ ಸರ್ಕಾರ ಈ ಪ್ರಶಸ್ತಿಯನ್ನು ಎಚ್​ಡಿಡಿ ಅವರಿಗೆ ನೀಡಿ ಗೌರವಿಸಲು ಮುಂದಾಗಿದೆ. ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಇಂದು ಎಚ್​ಡಿಡಿ ಅವರನ್ನು ಪದ್ಮನಾಭನಗರದ ನಿವಾಸದಲ್ಲಿ ಭೇಟಿ ಮಾಡಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಹ್ವಾನಿಸಿರು. 

ನಾಳೆ [ಬುಧವಾರ] ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ತಂದೆಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. 

click me!