ವಾಜಪೇಯಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ಗಣ್ಯರ ದೌಡು!

Published : Aug 11, 2018, 09:32 PM ISTUpdated : Sep 09, 2018, 08:33 PM IST
ವಾಜಪೇಯಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ಗಣ್ಯರ ದೌಡು!

ಸಾರಾಂಶ

ಮಾಜಿ ಪ್ರಧಾನಿ ವಾಜಪೇಯಿ ಆರೋಗ್ಯ ಗಂಭೀರ! ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ! ಆಸ್ಪತ್ರೆಗೆ ಭೇಟಿ ನೀಡಿದ ರಾಜನಾಥ್ ಸಿಂಗ್! ವಾಜಪೇಯಿ ಆರೋಗ್ಯ ಸ್ಥಿರ ಎಂದು ರಾಜನಾಥ್ ಟ್ವೀಟ್! ಶೀಘ್ರದಲ್ಲೇ ಆಸ್ಪತ್ರೆಗೆ ಭೇಟಿ ನೀಡಲಿರುವ ಅಮಿತ್ ಶಾ   

ನವದೆಹಲಿ(ಆ.11): ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯದಲ್ಲಿ ಏರುಪೇರಾಗಿದೆ.  ದೆಹಲಿಯ ಏಮ್ಸ್ ಆಸ್ಪತ್ರೆಗೆ ವಾಜಪೇಯಿ ಅವರನ್ನು ದಾಖಲಿಸಲಾಗಿದೆ.

ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ  ಬಳಲುತ್ತಿರುವ ಮಾಜಿ ಪ್ರಧಾನಿ ವಾಜಪೇಯಿ, ಇತ್ತೀಚಿಗಷ್ಟೇ ಏಮ್ಸ್ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು. ಇದೀಗ ವಾಜಪೇಯಿ ಆರೋಗ್ಯ ಮತ್ತೆ ಹದಗೆಟ್ಟಿದ್ದು,  ಅವರನ್ನು ಕೂಡಲೇ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ವಾಜಪೇಯಿ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೇ ಗೃಹ ಸಚಿವ ರಾಜನಾಥ್ ಸಿಂಗ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಾಜನಾಥ್, ವಾಜಪೇಯಿ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದ್ದಾರೆ. ಇನ್ನು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕೂಡ ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಲಿದ್ದು, ವಾಜಪೇಯಿ ಆರೋಗ್ಯ ವಿಚಾರಿಸಲಿದ್ದಾರೆ ಎನ್ನಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಳೆನರಸೀಪುರದ ಲಕ್ಷ್ಮಿನರಸಿಂಹ ಸ್ವಾಮಿ ರಥೋತ್ಸವ: ರಥದ ಅಲಂಕಾರದಲ್ಲಿ ರಾಜಕೀಯ:ಶ್ರೇಯಸ್ ಪಟೇಲ್ ವಿರುದ್ಧ JDS ಕಾರ್ಯಕರ್ತರ ಆಕ್ರೋಶ
ಇರಾನ್ ದಾಳಿಯ ಸಾವಿನ ದವಡೆಯಿಂದ ಪಾರಾಗಿ ಬೆಂಗಳೂರಿಗೆ ಬಂದಿಳಿದ 230 ಕನ್ನಡಿಗರು; ಬಾಂಬ್ ಬೀಳುವ ಅನುಭವ ಬಿಚ್ಚಿಟ್ಟರು!