ಅಧಿಕಾರ ಸ್ವೀಕರಿಸಿದ ಯಡಿಯೂರಪ್ಪಗೆ ದೇವೇಗೌಡರ ಅಭಿನಂದನೆ

Published : Jul 26, 2019, 10:48 PM ISTUpdated : Jul 26, 2019, 10:58 PM IST
ಅಧಿಕಾರ ಸ್ವೀಕರಿಸಿದ ಯಡಿಯೂರಪ್ಪಗೆ ದೇವೇಗೌಡರ ಅಭಿನಂದನೆ

ಸಾರಾಂಶ

ಕರ್ನಾಟಕದ 22ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿ.ಎಸ್‌.ಯಡಿಯುರಪ್ಪ ಅವರನ್ನು ಮಾಜಿ ಪ್ರಧಾನಿ ಎಚಚ್.ಡಿ.ದೇವೇಗೌಡ ಅಭಿನಂದಿಸಿದ್ದಾರೆ.

ಬೆಂಗಳೂರು[ಜು. 26] ಹಸಿರು ಶಾಲು ಹೊದ್ದು ಬಂದ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜುಲೈ 26, ಶುಕ್ರವಾರ ಸಂಜೆ 6.35ಕ್ಕೆ ರಾಜ್ಯಪಾಲ ವಿಆರ್ ವಾಲಾ ಯಡಿಯೂರಪ್ಪ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಮಾಜಿ ಪ್ರಧಾನಿ ದೇವೇಗೌಡರು ಟ್ವೀಟ್​ ಮೂಲಕ ಸಿಎಂ ಯಡಿಯೂರಪ್ಪಗೆ ಶುಭಾಶಯ ಕೋರಿದ್ದಾರೆ. ದೋಸ್ತಿ ಸರ್ಕಾರ ಪತನದ ನಂತರ ಬಿಎಸ್​​ವೈ ಸರ್ಕಾರ ರಚಿಸಲು ರಾಜ್ಯಪಾಲರ ಬಳಿ ಅವಕಾಶ ಕೋರಿದ್ದರು.

ಮತ್ತೊಮ್ಮೆ ಸಿಎಂ ಆದ್ರು ಯಡಿಯೂರಪ್ಪ, ಹೊಸ ಇನಿಂಗ್ಸ್ ಆರಂಭ

ಮಾಜಿ ಪ್ರಧಾನಿ ದೇವೇಗೌಡರ ಪುತ್ರ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ದೋಸ್ತಿ ಸರ್ಕಾರ ಸದನದ ವಿಶ್ವಾಸ ಕಳೆದುಕೊಂಡಿತ್ತು. ಇದಾದ ಮೇಲೆ  ವಿಪಕ್ಷ ಸ್ಥಾನದಲ್ಲಿದ್ದ ಬಿಜೆಪಿ ಹಕ್ಕು ಮಂಡಿಸಿ ಅಧಿಕಾರ ಸ್ಥಾಪನೆ ಮಾಡಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Karnataka News Live: ಪ್ರೀತಿಯಿಂದ ಊಟಕ್ಕೆ ಕರೀತಾರೆ ಬೇಡ ಅನ್ನೋಕಾಗುತ್ತಾ: DCM ಡಿಕೆ ಶಿವಕುಮಾರ್
ಪಿಎಂ ಫಸಲ್ ಬಿಮಾ ಯೋಜನೆ ದೊಡ್ಡ ಗೋಲ್‌ಮಾಲ್‌: ಸಚಿವ ಈಶ್ವರ್ ಖಂಡ್ರೆ ಗಂಭೀರ ಆರೋಪ