
ನವದೆಹಲಿ(ಡಿ.28): ದೆಹಲಿ ಲೆಫ್ಟಿನೆಂಟ್ ಜನರಲ್ ನಜೀಬ್ ಜಂಗ್ ರಾಜಿನಾಮೆಯಿಂದ ತೆರವುಗೊಂಡಿದ್ದ ಸ್ಥಾನಕ್ಕೆ ಕೇಂದ್ರದ ಮಾಜಿ ಗೃಹ ಕಾರ್ಯದರ್ಶಿ ಅನಿಲ್ ಬೈಜಾಲ್ ಅಧಿಕೃತವಾಗಿ ನೇಮಕಗೊಂಡಿದ್ದಾರೆ. ನಜೀಬ್ ಜಂಗ್'ರ ಅನಿರೀಕ್ಷಿತ ರಾಜಿನಾಮೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಂದ ಅಂಗೀಕಾರವಾಗಿದ್ದು, ಅವರ ಸ್ಥಾನಕ್ಕೆ ಪ್ರಸ್ತಾಪವಾಗಿದ್ದ ಬೈಜಾಲ್ ಹೆಸರು ಅಂತಿಮಗೊಂಡಿದೆ.
ಬೈಜಾಲ್ ನೇಮಕಕ್ಕೆ ಸಂಬಂಧಿಸಿದ ಅಧಿಕೃತ ಪ್ರಸ್ತಾವನೆ ಪ್ರಧಾನಿ ಮೋದಿ ಕಚೇರಿಯಿಂದ ಬುಧವಾರ ಸಂಜೆ ರಾಷ್ಟ್ರಪತಿ ಅವರ ಬಳಿ ಬಂದಿತ್ತು. ‘‘ದೆಹಲಿ ಲೆಫ್ಟಿನೆಂಟ್ ಗವರ್ನರ್ ಆಗಿ ಅನಿಲ್ ಬೈಜಾಲ್ ಅವರನ್ನು ನಾನು ಸ್ವಾಗತಿಸುತ್ತೇನೆ’’ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ದಾರೆ.
ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಕೇಂದ್ರ ಗೃಹ ಕಾರ್ಯದರ್ಶಿಯಾಗಿದ್ದ, 1969ರ ತಂಡದ ಐಎಎಸ್ ಅಧಿಕಾರಿ ಬೈಜಾಲ್, ಹಲವು ಸಚಿವಾಲಯಗಳಲ್ಲಿ ಪ್ರಮುಖ ಸ್ಥಾನಗಳನ್ನು ನಿರ್ವಹಿಸಿದ ಅನುಭವ ಹೊಂದಿದ್ದಾರೆ. 70ರ ಹರೆಯದ ಬೈಜಾಲ್ ನೇಮಕ ಪ್ರಸ್ತಾಪ ರಾಷ್ಟ್ರಪತಿ ಮುಖರ್ಜಿಯವರಿಗೆ ರವಾನೆಯಾಗಿತ್ತು.
2006ರಲ್ಲಿ ನಗರಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿಯಾಗಿ ಅವರು ನಿವೃತ್ತರಾಗಿದ್ದರು. ದೆಹಲಿ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದರು.
ಜಂಗ್ ಕಳೆದ ವಾರ ಅನಿರೀಕ್ಷಿತವಾಗಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ಎಲ್ಲರನ್ನೂ ಅಚ್ಚರಿ ಮೂಡಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.