ಕೇಂದ್ರದ ಮಾಜಿ ಸಚಿವ 4 ತಿಂಗಳಿಂದ ಕೋಮಾದಲ್ಲಿ

Published : Dec 05, 2018, 11:11 AM ISTUpdated : Dec 05, 2018, 11:23 AM IST
ಕೇಂದ್ರದ ಮಾಜಿ ಸಚಿವ 4 ತಿಂಗಳಿಂದ ಕೋಮಾದಲ್ಲಿ

ಸಾರಾಂಶ

ಕೇಂದ್ರದ ಮಾಜಿ ಸಚಿವರು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಕಳೆದ ನಾಲ್ಕು ತಿಂಗಳಿನಿಂದ ಮಾಜಿ ಸಚಿವ ಧನಂಜಯ್ ಕುಮಾರ್ ಆರೋಗ್ಯ ಹದಗೆಟ್ಟಿದೆ. 

ಬೆಂಗಳೂರು :  ಬಹು ಅಂಗಾಂಗ ವೈಫಲ್ಯದಿಂದ ನರಳುತ್ತಿರುವ ಕೇಂದ್ರದ ಮಾಜಿ ಸಚಿವ ವಿ.ಧನಂಜಯಕುಮಾರ್‌ ಅವರ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿದೆ.

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಅವರು ಕಳೆದ ನಾಲ್ಕು ತಿಂಗಳಿಂದ ಕೋಮಾದಲ್ಲಿದ್ದಾರೆ. ಹೊರ ಪ್ರಪಂಚದ ಅರಿವೇ ಇಲ್ಲದಂತಾಗಿದೆ ಎಂದು ಅವರ ಕುಟುಂಬದ ಆಪ್ತರು ತಿಳಿಸಿದ್ದಾರೆ.

67 ವರ್ಷ ವಯಸ್ಸಿನ ಧನಂಜಯ ಅವರು ಬಿಜೆಪಿಯಿಂದಲೇ ರಾಜಕೀಯ ಆರಂಭಿಸಿ ಶಾಸಕರಾಗಿ ಹಲವು ಬಾರಿ ಸಂಸದರಾಗಿದ್ದರು. ಬಿಜೆಪಿಯ ಹಾಲಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಹಿಂದೆ ಬಿಜೆಪಿ ತೊರೆದು ಕೆಜೆಪಿ ಕಟ್ಟಿದಾಗ ಅವರೊಂದಿಗೆ ಹೆಜ್ಜೆ ಹಾಕಿ ಬಲವಾಗಿ ನಿಂತಿದ್ದರು. 

ಆದರೆ, ನಂತರ ಯಡಿಯೂರಪ್ಪ ಅವರು ಬಿಜೆಪಿಗೆ ವಾಪಸಾದರೂ ಧನಂಜಯ ಅವರನ್ನು ವಾಪಸ್‌ ಕರೆದುಕೊಳ್ಳಲು ಬಿಜೆಪಿ ವರಿಷ್ಠರು ನಿರಾಕರಿಸಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಕ್ರಮ ದನ ಸಾಗಣೆ ವಾಹನ ಬಿಡುಗಡೆಗೆ ಖಾತ್ರಿ ಅನಗತ್ಯ- ಜಾನುವಾರು ಹತ್ಯೆ ಪ್ರತಿಬಂಧಕ ಬಿಲ್‌ಗೆ ತಿದ್ದುಪಡಿ
ವಧು-ವರ ಇಲ್ಲದೆ ಹುಬ್ಬಳ್ಳೀಲಿ ಆರತಕ್ಷತೆ!