
ಭೋಪಾಲ್[ಡಿ.17]: ಪಂಚ ರಾಜ್ಯ ಚುನಾವಣೆಯಲ್ಲಿ ಕಳೆದ 15 ವರ್ಷಗಳಿಂದ ಬಿಜೆಪಿಯ ಭದ್ರಕೋಟೆಯಂತಿದ್ದ ಮಧ್ಯಪ್ರದೇಶದಲ್ಲಿ ಜಯಭೇರಿ ಬಾರಿಸಿರುವ ಕಾಂಗ್ರೆಸ್ ಪಕ್ಷವು ಬಿಜೆಪಿ ನೇತೃತ್ವದ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರವನ್ನು ಮಣಿಸಿದೆ. ಇಂದು ಸೋಮವಾರ ಭೋಪಾಲ್‌ನಲ್ಲಿ ಕಾಂಗ್ರೆಸ್ ಪಕ್ಷದ ಕಮಲನಾಥ್ ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಅಧಿಕೃತವಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರ ವಹಿಸಿಕೊಂಡಿದೆ. ಸದ್ಯ ಈ ಕಾರ್ಯಕ್ರಮದ ವಿಡಿಯೋ ಒಂದು ವೈರಲ್ ಆಗುತ್ತಿದ್ದು, ಇದರಲ್ಲಿ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಕೈ ಮುಖಂಡ ಕಮಲನಾಥ್ ಹಾಗೂ ಯುವ ನಾಯಕ ಜೋತಿರಾಧಿತ್ಯ ಸಿಂಧಿಯಾರೊಂದಿಗೆ, ಬಿಜೆಪಿ ನಾಯಕ ಹಾಗೂ ಮಧ್ಯಪ್ರದೇಶದ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಸಂಭ್ರಮಿಸುತ್ತಿರುವುದು ಕಂಡು ಬಂದಿದೆ.
ಮಧ್ಯಪ್ರದೇಶದಲ್ಲಿ ಗೆದ್ದರೂ ಕಾಂಗ್ರೆಸ್ಸಿಗೆ ಇವಿಎಂ ಮೇಲೆ ಡೌಟ್!
ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಬದ್ಧವೈರಿಗಳಂತಿವೆ. ಅದರಲ್ಲೂ ಮಧ್ಯಪ್ರದೇಶದಲ್ಲಿ ಸಿಕ್ಕ ಸೋಲು ಬಿಜೆಪಿ ನಾಯಕರಿಗೆ ಬಹಳಷ್ಟು ಹಿನ್ನಡೆಯುಂಟು ಮಾಡಿತ್ತು. ಹೀಗಿರುವಾಗ ಕಾಂಗ್ರೆಸ್ ನಾಯಕರ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯದ ಮಾಜಿ ಸಿಎಂ ಕಾಂಗ್ರೆಸ್ ನಾಯಕರ ಸಂಭ್ರಮದಲ್ಲಿ ಪಾಲ್ಗೊಳ್ಳುವುದರೊಂದಿಗೆ, ಸಂಭ್ರಮಿಸಿರುವುದು ಬಿಜೆಪಿ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಮತ್ತೊಂದೆಡೆ ತಮ್ಮನ್ನು ಸೋಲಿಸಿದರೂ, ಇದಾವುದನ್ನೂ ಮನಸ್ಸಿನಲ್ಲಿಟ್ಟುಕೊಳ್ಳದೆ ಓರ್ವ ಸಾಮಾನ್ಯ ವ್ಯಕ್ತಿಯಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಿವರಾಜ್ ಚೌಹಾಣ್ ನಡೆಯನ್ನು ಹಲವರು ಶ್ಲಾಘಿಸಿದ್ದಾರೆ. ಕೈ ಮುಖಂಡರೂ ಗೌರವ ವ್ಯಕ್ತಪಡಿಸಿದ್ದಾರೆ.
Video: ನನಗೆ ಮತ ಹಾಕದವರಿಗೆ ಮುಂದೈತೆ ಮಾರಿ ಹಬ್ಬ: ಬಿಜೆಪಿ ನಾಯಕಿ ಮಾತು ಅಬ್ಬಬ್ಬಾ!
ಇನ್ನು ಮಧ್ಯಪ್ರದೇಶದ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ತಮ್ಮ ಪಕ್ಷಾತೀತ ಹಾಗೂ ನಡೆಗೆ ಬಹಳಷ್ಟು ಪ್ರಸಿದ್ಧರಾಗಿದ್ದಾರೆ ಅದೇನೇ ಇದ್ದರೂ ಸೋಲು ಗೆಲುವನ್ನು ಕೇವಲ ರಾಜಕೀಯಕ್ಕೆ ಮೀಸಲಿಟ್ಟು, ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾಜಿ ಸಿಎಂ ನಡೆ ಶ್ಲಾಘನೀಯ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ