
ಬೆಂಗಳೂರು (ಫೆ.06): ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ನೂತನವಾಗಿ ಆರಂಭಿಸಲಿರುವ ‘ಡಾ.ಬಿ.ಆರ್. ಅಂಬೇಡ್ಕರ್ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್' ಸ್ಥಾಪನೆಗೆ ಸರ್ಕಾರ .150 ಕೋಟಿ ಅನುದಾನ ಮಂಜೂರು ಮಾಡಿದ್ದು, ಅಂಬೇಡ್ಕರ್ ಜನ್ಮದಿನವಾದ ಏ.14 ರಂದು ಕಟ್ಟಡ ಶಂಕುಸ್ಥಾಪನೆ ನೆರವೇರಿ ಸುವುದಾಗಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.
ಬೆಂಗಳೂರು ವಿವಿ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ವಿವಿಧ ಇಲಾಖೆಗಳ ಕಟ್ಟಡ, ವಿದಾರ್ಥಿ ನಿಲಯದ ಹೆಚ್ಚುವರಿ ಕೊಠಡಿಗಳು ಹಾಗೂ ಈಜುಕೊಳ ಸೇರಿ ವಿವಿಧ ಸೇವೆಗಳಿಗೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿ, ವಿಶ್ವವಿಖ್ಯಾತ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮಾದರಿಯಲ್ಲೇ ಜ್ಞಾನಭಾರತಿ ಆವರಣದಲ್ಲಿ ಕಾಲೇಜು ಆರಂಭಿಸಲಾ ಗುತ್ತಿದೆ. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹೆಸರನ್ನು ಕಾಲೇಜಿಗೆ ನಾಮಕರಣ ಮಾಡಲಾ ಗುತ್ತಿದೆ ಎಂದು ತಿಳಿಸಿದರು.
ಈ ಕಾಲೇಜು ಆರಂಭದ ಹಿನ್ನೆಲೆ ಯಲ್ಲಿ ಆರ್‌ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಖ್ಯಾತ ಅರ್ಥಶಾಸ್ತ್ರಜ್ಞ ಅಮತ್ರ್ಯ ಸೇನ್‌ರಲ್ಲಿ ಒಬ್ಬರನ್ನು ಆಹ್ವಾನಿಸಿ ಮುಂದಿನ ತಿಂಗಳು ಅರ್ಥಶಾಸ್ತ್ರಕ್ಕೆ ಕಾರ್ಯಾಗಾರ ನಡೆಸಲಾಗುವುದು. ನಾಗರಿಕ ಕ್ಷೇತ್ರದಲ್ಲಿ ಅರ್ಥಶಾಸ್ತ್ರ ಬಹಳ ಪ್ರಾಮುಖ್ಯತೆ ಪಡೆಯುತ್ತದೆ. ಪ್ರತಿಯೊಬ್ಬರಿಗೂ ಒಂದಲ್ಲಾ ಒಂದು ಕಾರಣಕ್ಕೆ ಅರ್ಥಶಾಸ್ತ್ರ ನೆರವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.