
ವಾರಂಗಲ್, [ಜೂ.24]: ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಕರ್ ರಾವ್ ಅವರ ಪ್ರತಿಕೃತಿ ದಹಿಸಲು ಹೋಗಿ ಬೆಂಕಿ ತಗುಲಿ ಬಿಜೆಪಿ ನಾಲ್ವರು ಕಾರ್ಯಕರ್ತರು ಗಾಯಗೊಂಡಿರುವ ಘಟನೆ ನಡೆದಿದೆ.
9 ತಿಂಗಳ ಹಸುಗೂಸನ್ನು ಅತ್ಯಾಚಾರ ಮಾಡಿ ಹತ್ಯೆಗೈದ ಘಟನೆ ಸಂಬಂಧ ಆರೋಪಿಗೆ ಕಠಿಣ ಶಿಕ್ಷೆಗೆ ಒತ್ತಾಯಿಸಿ ವಾರಂಗಲ್ನಲ್ಲಿ ಪ್ರತಿಭಟನೆ ಕೈಗೊಂಡಿದ್ದ ವೇಳೆ ಅವಘಡ ಸಂಭವಿಸಿದೆ.
ಪ್ರತಿಭಟನೆ ವೇಳೆ ಕೆಸಿಆರ್ ಪ್ರತಿಕೃತಿಗೆ ಸೀಮೆಎಣ್ಣೆ ಎರಚಿ ಬೆಂಕಿ ಹಚ್ಚಿದ ವೇಳೆ ಬೆಂಕಿ ನಾಲ್ವರು ಕಾರ್ಯಕರ್ತರಿಗೆ ತಗುಲಿದೆ. ಆದ್ರೆ ಶ್ರೀನಿವಾಸ್ ಎಂಬ ಬಿಜೆಪಿ ಕಾರ್ಯಕರ್ತನಿಗೆ ಗಂಭೀರ ಗಾಯಗಳಾಗಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ.
ವಾರಂಗಲ್ನಲ್ಲಿ ಒಂಬತ್ತು ತಿಂಗಳ ಕಂದಮ್ಮನನ್ನು ಆರೋಪಿಯೊಬ್ಬ ಜೂ. 19ರಂದು ಅತ್ಯಾಚಾರ ಮಾಡಿ ಹತ್ಯೆ ಮಾಡಿದ್ದ. ಇದನ್ನು ಖಂಡಿಸಿ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಪ್ರತಿಭಟನೆ ಮಾಡುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.