9 ಐಎಎಸ್ ಅಧಿಕಾರಿಗಳ ವರ್ಗ : ಜಿಲ್ಲೆಗಳಿಗೆ ಹೊಸ ಡಿಸಿ

By Web DeskFirst Published Jul 30, 2018, 10:09 AM IST
Highlights

ಒಟ್ಟು 9 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಇದೀಗ ನಾಲ್ಕು ಜಿಲ್ಲೆಗಳಿಗೆ ಹೊಸ ಜಿಲ್ಲಾಧಿಕಾರಿಗಳನ್ನು ನೇಮಿಸಲಾಗಿದೆ. 

ಬೆಂಗಳೂರು : ಸೋಮವಾರ ವಿಧಾನಸೌಧದಲ್ಲಿ ಜಿಲ್ಲಾಧಿಕಾರಿ ಗಳು ಮತ್ತು ಜಿಲ್ಲಾ ಪಂಚಾಯತ್‌ಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ಕರೆದಿರುವ ಹಿಂದಿನ ದಿನವೇ ರಾಜ್ಯ ಸರ್ಕಾರ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸೇರಿದಂತೆ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿದೆ. 

ಸಾಮಾನ್ಯವಾಗಿ ಭಾನುವಾರ ಐಎಎಸ್ ಅಥವಾ ಐಪಿಎಸ್ ಅಧಿಕಾರಿಗಳ ವರ್ಗಾವಣೆ ನಡೆಯದಿದ್ದರೂ ಈ ಬಾರಿ ಭಾನುವಾರವೇ ವರ್ಗಾವಣೆ ಆದೇಶ ಹೊರಡಿಸಿರುವುದು ಅಚ್ಚರಿ ಮೂಡಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಯಾಗಿದ್ದ ಎಸ್ .ಪಾಲಯ್ಯ ಅವರನ್ನು ಕಾರ್ಮಿಕ ಆಯುಕ್ತರನ್ನಾಗಿ, ಯಾದಗಿರಿ ಜಿಲ್ಲಾ ಧಿಕಾರಿಯಾಗಿದ್ದ ಜೆ. ಮಂಜುನಾಥ್ ಅವರನ್ನು ಕೋಲಾರ ಜಿಲ್ಲಾಧಿಕಾರಿಯನ್ನಾಗಿ, ಹುದ್ದೆಯ ನಿರೀಕ್ಷೆಯಲ್ಲಿದ್ದ ಎಂ.ಕೂರ್ಮರಾವ್ ಅವರನ್ನು ಯಾದಗಿರಿ ಜಿಲ್ಲಾಧಿಕಾರಿಯನ್ನಾಗಿ ಮತ್ತು ಅನಿರುದ್ಧ್ ಶ್ರವಣ್ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಯನ್ನಾಗಿ, ಶಿವಮೊಗ್ಗ ಜಿ.ಪಂ. ಮುಖ್ಯ ಕಾರ್ಯನಿರ್ವ ಹಣಾಧಿಕಾರಿಯಾಗಿದ್ದ ಡಾ.ರಾಕೇಶ್ ಕುಮಾರ್ ಅವರನ್ನು ತುಮಕೂರು ಜಿಲ್ಲಾಧಿಕಾರಿಯನ್ನಾಗಿ ವರ್ಗಾಯಿಸಲಾಗಿದೆ.

ಸವಣೂರು ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ಮೊಹಮ್ಮದ್ ರೋಷನ್ ಅವರನ್ನು ಉತ್ತರ ಕನ್ನಡ ಜಿ.ಪಂ.ನ ಉಪ ಕಾರ್ಯದರ್ಶಿ- 2 ಸ್ಥಾನಕ್ಕೆ ವರ್ಗಾಯಿಸಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾಗಿದ್ದ ಡಾ.ಎನ್. ಶಿವಶಂಕರ್ ಅವರನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯನ್ನಾಗಿ, ಹೊಸಪೇಟೆಯ ಹಂಪಿ ವಿಶ್ವ ಪರಂಪರೆ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಗಿದ್ದ ಕರಿಗೌಡ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಯನ್ನಾಗಿ ಹಾಗೂ ಕೆಎಸ್‌ಆರ್‌ಟಿಸಿಯ (ಸಿಬ್ಬಂದಿ ಮತ್ತು ಪರಿಸರ) ನಿರ್ದೇಶಕ ಕೆ. ಶ್ರೀನಿವಾಸ್ ಅವರನ್ನು ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ ಯ ಆಯುಕ್ತರನ್ನಾಗಿ ವರ್ಗ ಮಾಡಲಾಗಿದೆ.    

click me!