ಕಾಶ್ಮೀರದಲ್ಲಿ ಉಗ್ರರ ದಾಳಿ-ನಾಲ್ಪರು ಪೊಲೀಸರು ಹುತಾತ್ಮ

Published : Aug 30, 2018, 11:38 AM ISTUpdated : Sep 09, 2018, 10:12 PM IST
ಕಾಶ್ಮೀರದಲ್ಲಿ ಉಗ್ರರ ದಾಳಿ-ನಾಲ್ಪರು ಪೊಲೀಸರು ಹುತಾತ್ಮ

ಸಾರಾಂಶ

ಕಾಶ್ಮೀರದಲ್ಲಿ ಮತ್ತೆ ಉಗ್ರರ ದಾಳಿಯಾಗಿದೆ. ಎರಡು ಕಡೆಗಳಲ್ಲಿ ನಡೆದ ದಾಳಿಯಲ್ಲಿ ನಾಲ್ಪರು ಪೊಲೀಸರು ಹುತಾತ್ಮರಾಗಿದ್ದಾರೆ. ಆದರೆ ಹಿಜ್ಬುಲ್ ಮುಜಾಹಿದೀನ್ ಉಗ್ರ ಸಂಘಟನೆಯ ಕಮಾಂಡರ್ ಉಗ್ರನನ್ನ ಹೊಡೆದುರುಳಿಸುವಲ್ಲಿ ಸೇನೆ ಯಶಸ್ವಿಯಾಗಿದೆ.

ಶ್ರೀನಗರ(ಆ.30): ಜಮ್ಮು-ಕಾಶ್ಮೀರದಲ್ಲಿ ಉಗ್ರರು ಮತ್ತು ಸೇನಾ ಯೋಧರ ನಡುವಿನ ಗುಂಡಿನ ಚಕಮಕಿಯಲ್ಲಿ ಹಿಜ್ಬುಲ್ ಮುಜಾಹಿದೀನ್ ಉಗ್ರ ಸಂಘಟನೆಯ ಕಮಾಂಡರ್ ಆಗಿದ್ದ ಅಲ್ತಾಫ್ ಅಹ್ಮದ್ ದಾರ್ ಅಲಿಯಾಸ್ ಅತಾಫ್ ಕಚ್ರೂ ಸೇರಿ ಇಬ್ಬರು ಉಗ್ರರು ಹತ್ಯೆಗೀಡಾಗಿದ್ದಾರೆ.

 ಮತ್ತೊಂದೆಡೆ ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಗುಂಡಿನ ಕಾಳಗದಲ್ಲಿ ನಾಲ್ವರು ಪೊಲೀಸರು ಹುತಾತ್ಮರಾಗಿದ್ದಾರೆ. ಶೋಪಿಯಾನ್ ಜಿಲ್ಲೆಯಲ್ಲಿರುವ ಹಣ್ಣಿನ ಮಂಡಿಯಲ್ಲಿ ಈ ಘಟನೆ ನಡೆದಿದ್ದು, ಜೀಪ್ ರಿಪೇರಿ ಮಾಡುತ್ತಿದ್ದ ಪೊಲೀಸರ ಮೇಲೆ ಉಗ್ರರು ಗುಂಡಿನ ಮಳೆಗರೆದಿದ್ದಾರೆ.

ಪೊಲೀಸರ ಹತ್ಯೆಗೈದ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.  ಆದರೆ ನಾಲ್ಪರು ಪೊಲೀಸರನ್ನ ಕಳೆದುಕೊಂಡ ಉಗ್ರರ ದಾಳಿಗೆ ಪ್ರತಿಕಾರ ತೀರಿಸಲು ಸೇನೆ ಸಜ್ಜಾಗಿದೆ.
 

PREV
click me!

Recommended Stories

ಥೈಲ್ಯಾಂಡ್‌ನಿಂದ ಚೀಲದಲ್ಲಿ 48 ವಿಷಕಾರಿ ಹಾವನ್ನು ತಂದ ಪ್ರಯಾಣಿಕ; ಇಲ್ಲಿವೆ ಫೋಟೋಗಳು
Bride Calls Off Wedding: ಮದುವೆ ಮಂಟಪದಲ್ಲೇ ವರನ ಅಸಲಿಯತ್ತು ಕಂಡುಹಿಡಿದ ವಧು! ಮದುವೆ ನಿಂತೋಯ್ತು!