ನಿರ್ವಹಣಾ ಮಂಡಳಿಗೆ ಮೇ 3ರರೊಳಗೆ ಸ್ಪಷ್ಟ ಮಾರ್ಗದರ್ಶಿ ಸೂತ್ರ ರಚಿಸುವಂತೆ ಕೇಂದ್ರಕ್ಕೆ ಸುಪ್ರಿಂ ನಿರ್ದೇಶನ

Published : Apr 09, 2018, 03:21 PM ISTUpdated : Apr 14, 2018, 01:13 PM IST
ನಿರ್ವಹಣಾ ಮಂಡಳಿಗೆ ಮೇ 3ರರೊಳಗೆ ಸ್ಪಷ್ಟ ಮಾರ್ಗದರ್ಶಿ ಸೂತ್ರ ರಚಿಸುವಂತೆ ಕೇಂದ್ರಕ್ಕೆ ಸುಪ್ರಿಂ ನಿರ್ದೇಶನ

ಸಾರಾಂಶ

ಸ್ಕೀಮ್ ಹೇಗಿರಬೇಕು ಎಂಬುದನ್ನು ನೀವು ತೀರ್ಮಾನಿಸಿ, ನಮಗೆ ಕರಡು ಸಲ್ಲಿಸಿ. ನಾವು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ. ನಾವು ಕೊಡುವ ತೀರ್ಪು  ಚಾಚೂ ತಪ್ಪದೆ ಪಾಲಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ತಿಳಿಸಿದ್ದಾರೆ.

ನವದೆಹಲಿ(ಏ.09): ಕಾವೇರಿ ನಿರ್ವಹಣಾ ಮಂಡಳಿ ಸ್ವರೂಪವನ್ನು ಮೇ.3ರೊಳಗೆ ರಚಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಸುಪ್ರಿಂ ಕೋರ್ಟ್ ನಿರ್ದೇಶಿಸಿದೆ.

ಸ್ಕೀಮ್ ಹೇಗಿರಬೇಕು ಎಂಬುದನ್ನು ನೀವು ತೀರ್ಮಾನಿಸಿ, ನಮಗೆ ಕರಡು ಸಲ್ಲಿಸಿ. ನಾವು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ. ನಾವು ಕೊಡುವ ತೀರ್ಪು  ಚಾಚೂ ತಪ್ಪದೆ ಪಾಲಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ತಿಳಿಸಿದ್ದಾರೆ.

ಮಂಡಳಿ ರಚನೆ ಕುರಿತು ಕೇಂದ್ರ ಸರ್ಕಾರ ಸಲ್ಲಿಸಿದ್ದ ಸ್ಪಷ್ಟೀಕರಣ ಅರ್ಜಿಗೆ ಸಂಬಂಧಿಸಿದಂತೆ ತೀರ್ಪು ನೀಡಿದ ಕೋರ್ಟ್, 2007ರ ನ್ಯಾಯಮಂಡಳಿ ಆದೇಶದ ಪ್ರಕಾರವೇ  ಮಂಡಳಿ ಇರಬೇಕೆಂಬ ವಾದಕ್ಕೆ ಸೊಪ್ಪು ಹಾಕಲಿಲ್ಲ. ಕೇಂದ್ರ ಸರ್ಕಾರ ನ್ಯಾಯಾಂಗ ನಿಂದನೆ ಮಾಡಿದೆ ಎಂದು ತಮಿಳುನಾಡು ವಾದ ಮಂಡಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..
ಅಡಕೆ ಬೆಳೆಗಾರರ ನೆರವಿಗೆ ಕೇಂದ್ರ ತುರ್ತಾಗಿ ಮಧ್ಯಪ್ರವೇಶಿಸಲಿ: ಸಂಸದ ಬಿ.ವೈ.ರಾಘವೇಂದ್ರ