
ಪ್ಯಾರಿಸ್ (ಜ.16): ಜೈಷ್ ಎ ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್'ನನ್ನು ಅಂತರರಾಷ್ಟ್ರೀಯ ಮಟ್ಟದ ಭಯೋತ್ಪಾದಕ ಎಂದು ಘೋಷಿಸಲು ವಿಶ್ವಸಂಸ್ಥೆಗೆ ಫ್ರಾನ್ಸ್ ಮನವಿ ಮಾಡಿದೆ.
ಅಜರ್'ನನ್ನು ಅಂತರರಾಷ್ಟ್ರೀಯ ಮಟ್ಟದ ಭಯೋತ್ಪಾದಕ ಎಂದು ಘೋಷಿಸಬೇಕೆಂಬ ಭಾರತದ ಪ್ರಸ್ತಾವಕ್ಕೆ ಚೀನಾ ಅಡ್ಡಿ ವ್ಯಕ್ತಪಡಿಸಿದ ಕೆಲವೇ ದಿನಗಳಲ್ಲಿ ಈ ಹೇಳಿಕೆ ಹೊರಬಿದ್ದಿದೆ.
ಜೈಷ್ ಎ ಮೊಹಮ್ಮದ್ ಭಯೋತ್ಪಾದಕ ಸಂಘಟನೆ ‘ಈಗಾಗಲೇ ಸಮಿತಿಯ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಪಟ್ಟಿಯಲ್ಲಿದೆ. ಆದ್ದರಿಂದ ಭಾರತದ ಮನವಿಯಂತೆ ಅಜರ್‌ನನ್ನು ಅಂತರರಾಷ್ಟ್ರೀಯ ಮಟ್ಟದ ಭಯೋತ್ಪಾದಕ ಎಂದು ಘೋಷಿಸಲು ಸಾಕಷ್ಟು ಬಲವಾದ ವಾದಗಳಿವೆ’ ಎಂದು ಫ್ರಾನ್ಸ್ ವಿದೇಶಾಂಗ ಸಚಿವ ಜೀನ್ ಮಾರ್ಕ್ ಆರ್ಯಾಲ್ಟ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.