ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್

First Published Jun 25, 2018, 8:35 AM IST
Highlights

ಸರ್ಕಾರಿ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಎಲ್ಲ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‌ಟಾಪ್ ವಿತರಿಸುವ ಹಿಂದಿನ ಸರ್ಕಾರದ ಯೋಜನೆಯನ್ನು ಮುಂದುವರಿ ಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ತಿಳಿಸಿದರು.

ಬೆಂಗಳೂರು: ಸರ್ಕಾರಿ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಎಲ್ಲ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‌ಟಾಪ್ ವಿತರಿಸುವ ಹಿಂದಿನ ಸರ್ಕಾರದ ಯೋಜನೆಯನ್ನು ಮುಂದುವರಿ ಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಗಿತಗೊಂಡಿರುವ ಯೋಜನೆಗೆ ಟೆಂಡರ್ ಕರೆದು ಲ್ಯಾಪ್‌ಟಾಪ್ ವಿತರಿಸಲಾಗುವುದು ಎಂದು ಸ್ಪಷ್ಟಪಡಿಸಿದರು. 

ಬಜೆಟ್ ಬಳಿಕ ಪ್ರಕ್ರಿಯೆ: ಕುಲಪತಿ, ಪ್ರಾಂಶುಪಾಲರು ಹಾಗೂ ಪ್ರಾಧ್ಯಾಪಕರ ಹುದ್ದೆ ಭರ್ತಿಗೆ ಶೀಘ್ರವೇ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಜತೆ ಸಭೆ ನಡೆಸಲಾಗುವುದು. ಸರ್ಕಾರಿ ಪದವಿ ಕಾಲೇಜಿಗೆ ಮೂಲಸೌಕರ್ಯ ಕಲ್ಪಿಸುವುದು ಹಾಗೂ 400 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರ ಹುದ್ದೆ ಭರ್ತಿಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು. 

ಕೆಎಸ್‌ಒಯು ಮಾನ್ಯತೆ ಪಡೆದೇ ಪಡೆಯುತ್ತೇವೆ. ಈ ಸಂಬಂಧ ಖುದ್ದಾಗಿ ವಿಶ್ವವಿದ್ಯಾಲಯ ಅನುದಾನ ಆಯೋಗದ(ಯುಜಿಸಿ) ಮುಖ್ಯಸ್ಥರನ್ನು ಭೇಟಿ ಮಾಡಲು ನಿರ್ಧರಿಸಿದ್ದೇನೆ ಎಂದು ಹೇಳಿದರು

click me!