ಇಂಥ ಖಾಸಗಿ ಆಸ್ಪತ್ರೆಗಳಲ್ಲಿ ಬಡವರಿಗೆ ಫ್ರೀ ಟ್ರೀಟ್‌ಮೆಂಟ್ ಸಿಗುತ್ತೆ

First Published Jul 9, 2018, 4:49 PM IST
Highlights

ಸರಕಾರದಿಂದ ವಿವಿಧ ಲಾಭ ಪಡೆದುಕೊಳ್ಳುವ ಖಾಸಗಿ ಆಸ್ಪತ್ರೆಗಳು ಬಡವರ ನೆರವಿಗೆ ಧಾವಿಸಬೇಕು. ಅವರಿಗೆ ಉಚಿತ ಸೌಲಭ್ಯ ಕಲ್ಪಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನವದೆಹಲಿ[ಜು.9] ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅನೇಕ ಖಾಸಗಿ ಆಸ್ಪತ್ರೆಗಳು ಸರಕಾರದಿಂದ ರಿಯಾಯಿತಿ ದರದಲ್ಲಿ ಭೂಮಿ ಪಡೆದುಕೊಂಡಿವೆ. ಇಂಥ ಆಸ್ಪತ್ರೆಗಳು ಬಡವರಿಗೆ ಉಚಿತ ಚಿಕಿತ್ಸೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸರಕಾರದಿಂದ ಭೂಮಿ ಪಡೆದುಕೊಳ್ಳುವ ಸಂದರ್ಭ ಮಾಡಿಕೊಂಡಿದ್ದ ಒಪ್ಪಂದಕ್ಕೆ ಬದ್ಧರಾಗಿ ನಡೆಯದಿದ್ದರೆ ಅದನ್ನು ಸಹಿಸಲು ಸಾಧ್ಯವಿಲ್ಲ. ಅಂಥ ಆಸ್ಪತ್ರೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಸಂಬಂಧಿಸಿದವರಿಗೆ ನಿರ್ದೇಶನ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದೆ.

ಖಾಸಗಿ ಆಸ್ಪತ್ರೆಗಳು ಬಡ ರೋಗಿಗಳನ್ನು ಹೇಗೆ ನಡೆಸಿಕೊಳ್ಳುತ್ತಿವೆ ಎಂಬುದನ್ನು ದೆಹಲಿ ಸರಕಾರವೇ ಪರಿಶೀಲನೆ ಮಾಡಬೇಕು. ಅಲ್ಲದೇ ಅವಧಿಗೆ ಅನುಗುಣವಾಗಿ ವರದಿ ತಯಾರಸಿಟ್ಟುಕೊಳ್ಳಬೇಕು ಎಂದು ಹೇಳಿದೆ.[ಸಾಂದರ್ಭಿಕ ಚಿತ್ರ]

 

 

 

 

 

 

 

 

 

 

 

 

 

click me!