
ಬೆಂಗಳೂರು : ಸದ್ಯದಲ್ಲೇ ಪ್ರಯಾಣಿಕರಿಗೆ ಬೆಂಗಳೂರು ಸಾರಿಗೆ ಸಂಸ್ಥೆ ಶಾಕ್ ನೀಡಲಿದೆ. ವಾರ್ಷಿಕವಾಗಿ 225 ಕೋಟಿ ರೂಪಾಯಿ ನಷ್ಟದಲ್ಲಿರುವ ಹಿನ್ನೆಲೆಯಲ್ಲಿ ಬಿಎಂಟಿಸಿ ನಿಗಮ ಟಿಕೇಟ್ ದರ ಹೆಚ್ಚಳ ಮಾಡಲು ಮುಂದಾಗಿದೆ.
ಇನ್ನು ದಿನದಿಂದ ದಿನಕ್ಕೆ ಡೀಸೆಲ್ ದರವೂ ಕೂಡ ಹೆಚ್ಚಳವಾಗುತ್ತಿದ್ದು, ಬಿಎಂಟಿಸಿಗೆ ತಿಂಗಳಿಗೆ 6 ಕೋಟಿಯಷ್ಟು ಹೆಚ್ಚುವರಿ ಹೊರೆಯಾಗಿದೆ. ಇದರಿಂದ ಬಿಎಂಟಿಸಿ ನಷ್ಟವನ್ನು ಕಡಿಮೆ ಮಾಡುವ ಪ್ರಯತ್ನ ಕೈಮೀರಿ ಹೋಗಿದೆ. ಆದ್ದರಿಂದ ಶೀಘ್ರದಲ್ಲೇ ಬಿಎಂಟಿಸಿ ದರ ಪರಿಷ್ಕರಣೆ ಆಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಅಲ್ಲದೇ ಕೂಡಲೆ ಟಿಕೇಟ್ ದರ ಹೆಚ್ಚಳ ಮಾಡಿ ಇಲ್ಲವೇ ನಷ್ಟ ಭರಿಸಿ ಎಂದು ಸರ್ಕಾರಕ್ಕೆ ಮನವಿ ಮಾಡಲಿದ್ದಾರೆ. ಬಿಎಂಟಿಸಿ ನಿಗಮ ನಡೆಯಬೇಕು ಎಂದರೆ ಟಿಕೇಟ್ ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ ಎಂದು ಬಿಎಂಟಿಸಿ ಸಂಸ್ಥೆಯ ಉನ್ನತ ಮೂಲಗಳು ಸುವರ್ಣ ನ್ಯೂಸ್ ಗೆ ಮಾಹಿತಿ ನೀಡಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.