
ನವದೆಹಲಿ(ಜೂ.5): ಗಗನಕ್ಕೇರಿ ಜನಸಾಮಾನ್ಯರಲ್ಲಿ ಆತಂಕ ಮೂಡಿಸಿದ್ದ ಪೆಟ್ರೋಲ್ ಮತ್ತು ಡೀಸೆಲ್ ದರ ಕ್ರಮೇಣ ಇಳಿಕೆಯಾಗುತ್ತಿದ್ದು, ಸತತ 7ನೇ ದಿನವೂ ತೈಲ ದರದಲ್ಲಿ ಇಳಿಕೆ ಕಂಡು ಬಂದಿದೆ.
ಇಂದು ಬೆಳಗ್ಗೆ ಪೆಟ್ರೋಲ್ ದರಲ್ಲಿ 46 ರಿಂದ 49 ಪೈಸೆಯವರೆಗೂ ದರ ಇಳಿಕೆಯಾಗಿದ್ದು, ಡೀಸೆಲ್ ದರದಲ್ಲಿ 34 ರಿಂದ 36 ಪೈಸೆಯಷ್ಟು ದರ ಇಳಿಕೆಯಾಗಿದೆ. ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ದರದಲ್ಲಿ ಗಣನೀಯ ಇಳಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಭಾರತದಲ್ಲಿ ದರ ಕಡಿಮೆ ಮಾಡಲಾಗುತ್ತಿದೆ.
ದೆಹಲಿ, ಕೊಲ್ಕತ್ತಾ, ಮುಂಬೈ ಮತ್ತು ಚೆನ್ನೈ ಜಿಲ್ಲೆಗಳಲ್ಲಿ ಪೆಟ್ರೋಲ್ ದರದಲ್ಲಿ 14 ರಿಂದ 16 ಪೈಸೆಯಷ್ಟು ಇಳಿಕೆ ಕಂಡುಬಂದಿದೆ. ಡೀಸೆಲ್ ದರದಲ್ಲಿ 9 ರಿಂದ 10 ಪೈಸೆಯಷ್ಟು ಇಳಿಕೆ ಕಂಡುಬಂದಿದೆ. ಇನ್ನು ಬೆಂಗಳೂರಿನಲ್ಲಿ ಪೆಟ್ರೋಲ್ ದರ ಪ್ರತೀ ಲೀಟರ್ ಗೆ 79.1 ರೂಗೆ ಇಳಿಕೆಯಾಗಿದ್ದು, ಡೀಸೆಲ್ ದರ 70.6 ರೂ ಗೆ ಇಳಿಕೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.