
ಲಂಡನ್(ಮಾ.20): ಮಹತ್ವದ ಬೆಳವಣಿಗೆಯೊಂದರಲ್ಲಿ ಪಂಜಾಬ್ ನ್ಯಾಶನಲ್ ಬ್ಯಾಂಕ್‌ಗೆ ವಂಚನೆ ಮಾಡಿ ಪರಾರಿಯಾಗಿದ್ದ ಉದ್ಯಮಿ ನೀರವ್ ಮೋದಿಯನ್ನು ಇಂಗ್ಲೆಂಡ್ ನಲ್ಲಿ ಬಂಧಿಸಲಾಗಿದೆ.
ಉದ್ಯಮಿ ವಿಜಯ್ ಮಲ್ಯ ಅವರ ಬಂಧನದ ಬಳಿಕ ಇದೀಗ ವಜ್ರ ಉದ್ಯಮಿ ನೀರವ್ ಮೋದಿ ಸರದಿ ಬಂದಿದ್ದು, ಲಂಡನ್‌ನ ವೆಸ್ಟ್ಮಿನಿಸ್ಟರ್ ಕೋರ್ಟ್ ಬಂಧನದ ಆದೇಶ ಹೊರಡಿಸಿದೆ.
ವೆಸ್ಟ್ಮಿನ್ಸ್ಟರ್ ಕೋರ್ಟ್ನಿಂದ ಜಾಮೀನು ರಹಿತ ವಾರಂಟ್ ಜಾರಿಯಾಗಿದ್ದು, ಮುಂದಿನ 24 ಗಂಟೆಗಳಲ್ಲಿ ನೀರವ್ ಮೋದಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಆದೇಶ ನೀಡಲಾಗಿದೆ.
ಶೀಘ್ರವೇ ನೀರವ್ ಮೋದಿಯನ್ನು ಲಂಡನ್ ಪೊಲೀಸರು ಬಂಧಿಸಲಿದ್ದು, ವೆಸ್ಟ್ಮಿನ್ಸ್ಟರ್ ಕೋರ್ಟ್ ವಿಚಾರಣೆಯನ್ನು ಮಾರ್ಚ್ 25ಕ್ಕೆ ಮುಂದೂಡಿದೆ.
ಪಂಜಾಬ್ ಬ್ಯಾಂಕ್‌ಗೆ 13 ಸಾವಿರ ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ನೀರವ್ ಮೋದಿ ಬಂಧನವಾಗಿರುವುದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ದೊರೆತ ರಾಜತಾಂತ್ರಿಕ ಗೆಲುವು ಎಂದು ಬಣ್ಣಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.