
ಬೆಂಗಳೂರು[ಆ.03]: ಮುಂದಿನ ದಿನದಲ್ಲಿ ಎದುರಾಗುವ ಉಪಚುನಾವಣೆ ಕುರಿತು ಕಾಂಗ್ರೆಸ್ ನಾಯಕರು ಯಾವ ನಿರ್ಣಯ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡುತ್ತಿದ್ದೇವೆ. ಕಾಂಗ್ರೆಸ್ ಮುಖಂಡರು ಕೈಗೊಳ್ಳುವ ತೀರ್ಮಾನದ ಮೇಲೆ ಮೈತ್ರಿಯ ಭವಿಷ್ಯ ಅವಲಂಬಿಸಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಶುಕ್ರವಾರ ಪಕ್ಷದ ಕಚೇರಿಯಲ್ಲಿ ನಡೆದ ಸವಿತಾ ಸಮಾಜದ ವಿವಿಧ ಮುಖಂಡರ ಸೇರ್ಪಡೆಗೊಂಡ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷವು ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ. ಆದರೆ, ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ 17 ಶಾಸಕರ ಕ್ಷೇತ್ರಗಳಿಗೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮುಂದುವರಿಸಬೇಕೇ ಅಥವಾ ಬೇಡವೇ ಎಂಬುದು ಆ ಪಕ್ಷದ ಮುಖಂಡರು ಕೈಗೊಳ್ಳುವ ತೀರ್ಮಾನದ ಮೇಲೆ ಅವಲಂಬನೆಯಾಗಿರುತ್ತದೆ. ಅವರ ನಿರ್ಧಾರವನ್ನು ಎದುರು ನೋಡಲಾಗುತ್ತಿದೆ ಎಂದು ಹೇಳಿದರು.
ಒಟ್ಟು 17 ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರದ ಶಾಸಕರು ಜೆಡಿಎಸ್ ಪಕ್ಷದವರಾಗಿದ್ದಾರೆ. ಉಳಿದ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದವರಾಗಿದ್ದಾರೆ. ಶಾಸಕರ ಅನರ್ಹತೆ ಪ್ರಕರಣವು ಇನ್ನೂ ಸುಪ್ರೀಂಕೋರ್ಟ್‌ನಲ್ಲಿದ್ದು, ತೀರ್ಮಾನವಾಗಬೇಕು. ಹೀಗಾಗಿ ಈಗಲೇ ಉಪಚುನಾವಣೆಯ ಪೂರ್ವ ಮೈತ್ರಿ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲ. ಸುಪ್ರೀಂಕೋರ್ಟ್‌ನ ತೀರ್ಪು ಬಂದ ಬಳಿಕ ಮುಂದಿನ ನಿರ್ಣಯ ಕೈಗೊಳ್ಳಲಾಗುವುದು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.