
ಮಂಡ್ಯ(ಮೇ.03): ತಮಿಳುನಾಡಿಗೆ ನೀರು ಬಿಟ್ಟರೆ ಕರ್ನಾಟಕದ ಜನರು ಸಿದ್ದರಾಮಯ್ಯ ಅವರ ರಕ್ತ ಕುಡಿಯುತ್ತಾರೆ ಎಂದು ಮಂಡ್ಯದ ಮಾಜಿ ಸಂಸದ ಹಾಗೂ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡ ಎಚ್ಚರಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕೆಆರ್'ಎಸ್ ಅಣೆಕಟ್ಟೆಯಲ್ಲೆ ನೀರಿಲ್ಲ ಈಗಾಗಲೆ ನಮ್ಮ ರಾಜ್ಯದ ರೈತರ ಬೆಳೆಗಳಿಗೆ ಪೂರಕವಾದ
ನೀರಿಲ್ಲದೆ ಬೆಳೆಗಳು ಒಣಗುವಂತ ಪರಿಸ್ಥಿತಿ ಬಂದಿದೆ. ಹೀಗಿರುವಾಗ ತಮಿಳುನಾಡಿಗೆ ನೀರುಬಿಡಲು ಸಾಧ್ಯವೇ ಇಲ್ಲ. ರಾಜ್ಯಸರ್ಕಾರ ಸುಪ್ರೀಂ ಕೋರ್ಟ್'ಗೆ ರಾಜ್ಯದ ಸದ್ಯದ ಪರಿಸ್ಥಿತಿ ಮನವರಿಕೆ ಮಾಡಿಸಬೇಕು. ಒಂದು ವೇಳೆ ತಮಿಳುನಾಡಿಗೆ ನೀರು ಬಿಟ್ಟಿದ್ದೆ ಆದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡೋದಾಗಿ ಎಚ್ಚರಿಸಿದ್ದಾರೆ. ರಾಜ್ಯದಲ್ಲಿ ಕುಡಿಯಲು ಸಮರ್ಪಕವಾಗಿ ನೀರು ಸಿಗುತ್ತಿಲ್ಲ.
ನೀರಿಲ್ಲದೆ ಕಾವೇರಿ ಕೊಳ್ಳದ ರೈತರ ಬೆಳೆಗಳು ಒಣಗುತ್ತಿವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಪ್ರೀಂ ಕೋರ್ಟ್ ಗೆ ರಾಜ್ಯದ ವಾಸ್ತವ ಸ್ಥಿತಿ ಅರ್ಥ ಮಾಡಿಸಬೇಕು. ಯಾವುದೇ ಕಾರಣಕ್ಕು ನೀರು ಬಿಡಬಾರದು ಒಂದು ವೇಳೆ ನೀರು ಬಿಟ್ಟರೆ ಜನರು ಸಿದ್ದರಾಮಯ್ಯ ನವ್ರ ರಕ್ತ ಕುಡಿಯುತ್ತಾರೆ ಅಂತ ಕಡಕ್ಕಾಗಿ ಎಚ್ಚರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.