
ಬೆಂಗಳೂರು: ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿರುವ ಕೆಲವು ಆರೋಪಿ ಶಾಸಕರ ಬಗ್ಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಾ| ಜಿ.ಪರಮೇಶ್ವರ ಅವರು, ಈ ಶಾಸಕರ ಮೇಲಿನ ಆರೋಪಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ ಎಂದಿದ್ದಾರೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ‘ಕಾಂಗ್ರೆಸ್‌ಗೆ ಸೇರ್ಪಡೆಯಾಗಿರುವ ಶಾಸಕರಾದ ಅಶೋಕ್ ಖೇಣಿ, ಆನಂದ್‌ಸಿಂಗ್, ನಾಗೇಂದ್ರ ಅವರ ಮೇಲೆ ಕಳಂಕ ಇರಬಹುದು. ಆದರೆ, ಇದರಿಂದ ಪಕ್ಷಕ್ಕೆ ಯಾವುದೇ ಹಾನಿಯಾಗುವುದಿಲ್ಲ. ಯಾವುದೇ ಹಂತದಲ್ಲೂ ಪರ ವಕಾಲತ್ತು ವಹಿಸುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.
ನ್ಯಾಯಾಲಯ ನಿರ್ದೋಷಿ ಅಥವಾ ಅಪರಾಧಿ ಎಂದು ಯಾವುದೇ ತೀರ್ಪು ನೀಡಿದರೂ ಅದಕ್ಕೆ ಸದರಿ ಶಾಸಕರೇ ಹೊಣೆ ಯಾಗಿರುತ್ತಾರೆ. ಅದಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ ಎಂದರು. ನಾಗೇಂದ್ರ ಹಾಗೂ ಆನಂದ ಸಿಂಗ್ ಮೇಲೆ ಅಕ್ರಮ ಗಣಿಗಾರಿಕೆ ಆರೋಪ ಇದೆ. ಅಶೋಕ್ ಖೇಣಿ ಅವರ ಮೇಲೆ ನೈಸ್ ರಸ್ತೆ ಭೂಕಬಳಿಕೆ ಆರೋಪ ಇದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸಮರ್ಥ ನಾಯಕತ್ವ ಹಾಗೂ ಗೆಲ್ಲುವ ಖಾತ್ರಿ ಇದ್ದರೆ ಸಚಿವರು, ಶಾಸಕರು ಹಾಗೂ ಪ್ರಭಾವಿಗಳ ಮಕ್ಕಳಿಗೆ ಟಿಕೆಟ್ ನೀಡಲಾಗುವುದು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.