
ಗದಗ : ಗದಗದ ಲಿಂಗಾಯತ ತೋಂಟದಾರ್ಯ ಸಿದ್ಧಲಿಂಗ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ.
ತೀವ್ರ ಹೃದಯಾಘಾತದಿಂದ ಸ್ವಾಮೀಜಿ ಅವರು ಕೊನೆಯುಸಿರೆಳೆದಿದ್ದಾರೆ. ತೀವ್ರ ಹೃದಯಾಘಾತಕ್ಕೆ ಒಳಗಾದ ಅವರನ್ನು ಗದಗದ ಚಿರಾಯು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಶನಿವಾರ ಶ್ರೀಗಳು ವಿಧಿವಶರಾಗಿದ್ದಾರೆ.
"
ಲಿಂಗಾಯತ ಧರ್ಮದ ಪ್ರಮುಖ ಸ್ವಾಮೀಜಿಯಾಗಿದ್ದ ಅವರು ಹಲವು ಹೋರಾಟಗಳಲ್ಲಿಯೂ ಕೂಡ ಪಾಲ್ಗೊಂಡಿದ್ದರು. ಅಪಾರ ಭಕ್ತರನ್ನು ಸ್ವಾಮೀಜಿ ಅಗಲಿದ್ದು, ಭಕ್ತರು ಶೋಕ ಸಾಗರದಲ್ಲಿ ಮುಳುಗಿದೆ.
ಸ್ವಾಮೀಜಿ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಎಚ್.ಡಿ. ದೇವೇಗೌಡ. ಸಿದ್ದರಾಮಯ್ಯ ಸೇರಿದಂತೆ ಅನೇಕರು ತೀವ್ರ ಸಂತಾಪ ಸೂಚಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.