
ಬೆಂಗಳೂರು: ಕಬ್ಬನ್'ಪಾರ್ಕ್'ನಲ್ಲಿ ಈಗಿರುವ ಎರಡು ಶೌಚಾಲಯಗಳ ಜತೆಗೆ ಭಾರತೀಯ ಗ್ಯಾಸ್ ಪ್ರಾಧಿಕಾರ(ಗೈಲ್)ಸಂಸ್ಥೆ ಮತ್ತೊಂದು ಇ-ಶೌಚಾಲಯ ನಿರ್ಮಿಸಲು ಮುಂದಾಗಿದೆ. ಶೌಚಾಲಯದ ಸಮಸ್ಯೆಯಿಂದ ಪರದಾಡುತ್ತಿರುವ ಪ್ರಾವಸಿಗರ ನೆರವಿಗೆ ಮುಂದಾಗಿರುವ ಗೈಲ್ ಸಂಸ್ಥೆ ಮುಂದಿನ ಒಂದು ವಾರದಲ್ಲಿ ಮಹಿಳೆಯರು ಹಾಗೂ ಪುರುಷರಿಗೆ ಒಂದರೆಂತೆ ಪತ್ಯೇಕ ಶೌಚಾಲಯ ನಿರ್ಮಿಸಿಕೊಡಿವುದಾಗಿ ತೋಟಗಾರಿಕಾ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದೆ. ಅಲ್ಲದೆ, ಶೌಚಾಲಯಗಳನ್ನು ನಿರ್ಮಾಣ ಮಾಡಿದ ಬಳಿಕ ನಿರ್ವಹಣೆಗಾಗಿ ತೋಟಗಾರಿಕಾ ಇಲಾಖೆಗೆ ಹಸ್ತಾಂತರಿಸಲಾಗುವುದು ಎಂದು ತಿಳಿಸಿದೆ. ಗೈಲ್ ಅಧಿಕಾರಿಗಳ ಮನವಿ ಸ್ವೀಕರಿಸಿದ ತೋಟಗಾರಿಕಾ ಇಲಾಖೆ ಅಧಿಕಾರಿಗಳು, ಈ ಸಂಬಂಧ ಪರಿಶೀಲಿಸಿ ಶೌಚಾಲಯ ನಿರ್ಮಾಣ ಮಾಡಲು ಸೂಕ್ತ ಸ್ಥಳ ಗುರುತಿಸಿ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ. ಕಳೆದ ನಾಲ್ಕು ತಿಂಗಳಿನಿಂದ ಕೃತಕವಾಗಿ ನಿರ್ಮಿಸಿದ್ದ ಶೌಚಾಲಯ ಸ್ಥಗಿತಗೊಂಡಿದ್ದು, ಸಾರ್ವಜನಿಕರು ಪರದಾಡುವಂತಾಗಿತ್ತು. ಗೈಲ್ ಸಂಸ್ಥೆ ಈಗ ಶೌಚಾಲಯ ನಿರ್ಮಾಣಕ್ಕೆ ಮುಂದಾಗಿದ್ದು, ಪ್ರವಾಸಿಗರಿಗೆ ಅನುಕೂಲವಾಗಲಿದೆ.
epaperkannadaprabha.com
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.