ರಾಜ್ಯಕ್ಕೂ ಮದ‘ಗಜ’ ಎಂಟ್ರಿ : ಎಲ್ಲೆಲ್ಲಾ ಸುರಿಯುತ್ತೆ ಮಳೆ..?

By Web DeskFirst Published Nov 19, 2018, 1:18 PM IST
Highlights

ತಮಿಳುನಾಡಿನಲ್ಲಿ ಗಜ ಚಂಡಮಾರುತ ಅಪ್ಪಳಿಸಿದ್ದು ಇದರಿಂದ ಭಾರೀ ಪ್ರಮಾಣದಲ್ಲಿ ಅವಾಂತರ ಸೃಷ್ಟಿ ಮಾಡಿದೆ. ಇದರ ಎಫೆಕ್ಟ್ ಈಗ  ಉಡುಪಿ ಸೇರಿದಂತೆ ಕರಾವಳಿ ಪ್ರದೇಶಕ್ಕೆ ತಟ್ಟಿದೆ. ಇದರಿಂದ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. 

ಉಡುಪಿ :  ಗಜ ಚಂಡಮಾರುತದ ಪ್ರಭಾವದಿಂದ ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ ಗುಡುಗು ಸಿಡಿಲು ಸಹಿತ ವ್ಯಾಪಕ ಮಳೆಯಾಗುತ್ತಿದೆ.  ಗಜ ಚಂಡಮಾರುತದ ಎಫೆಕ್ಟ್ ರಾಜ್ಯದ ಹಲವು ಪ್ರದೇಶಗಳಿಗೆ ತಟ್ಟಿದೆ. 

 ಉಡುಪಿ ಜಿಲ್ಲೆಯಲ್ಲಿ ಮೋಡ ಮುಸುಕಿದ ವಾತಾವರಣವಿದ್ದು, ಅಲ್ಲಲ್ಲಿ ತುಂತುರು ಮಳೆಯಾಗುತ್ತಿದೆ. ಈ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. 

ತಮಿಳುನಾಡಿನಲ್ಲಿ ಭಾರೀ ಪ್ರಮಾಣದಲ್ಲಿ ಅನಾಹುತ ಸೃಷ್ಟಿ ಮಾಡಿದ್ದ ಗಜ ಚಂಡಮಾರುತದಿಂದ ಹಲವು ಪ್ರದೇಶಗಳಲ್ಲಿ ಮಳೆ ಸುರಿಯುತ್ತಿದೆ. ಅಲ್ಲದೇ ಮುಂದಿನ 2 ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

click me!