ಸಂಭ್ರಮದ ಮಧ್ಯೆ ಸೂತಕ: ಗಣೇಶನ ಹೊತ್ತ ವಾಹನ ಡಿಕ್ಕಿ, ಬಾಲಕ ಸಾವು

Published : Aug 28, 2017, 09:00 AM ISTUpdated : Apr 11, 2018, 12:54 PM IST
ಸಂಭ್ರಮದ ಮಧ್ಯೆ ಸೂತಕ: ಗಣೇಶನ ಹೊತ್ತ ವಾಹನ ಡಿಕ್ಕಿ, ಬಾಲಕ ಸಾವು

ಸಾರಾಂಶ

ಗಣೇಶನ ಮೆರವಣಿಗೆ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಹರಿದು ಬಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕುರುಬರಹಳ್ಳಿಯಲ್ಲಿ ನಡೆದಿದೆ.

ಬೆಂಗಳೂರು(ಆ.28): ಗಣೇಶನ ಮೆರವಣಿಗೆ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಹರಿದು ಬಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕುರುಬರಹಳ್ಳಿಯಲ್ಲಿ ನಡೆದಿದೆ.

10ನೇ ತರಗತಿ ಓದುತ್ತಿದ್ದ ವೆಂಕಟೇಶ್ ಮೃತ ಬಾಲಕ. ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಣೇಶನ ಮೂರ್ತಿ ಮೆರವಣಿಗೆಯಲ್ಲಿ ಕೊಂಡೊಯ್ಯುತ್ತಿದ್ದಾಗ ಇಳಿಜಾರಾದ ಪ್ರದೇಶದಲ್ಲಿ  ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡಿದ್ದೇ ಈ ದುರ್ಘಟನೆಗೆ ಕಾರಣ ಎನ್ನಲಾಗ್ತಿದೆ.

ಘಟನೆ ನಡೆಯುತ್ತಿದ್ದಂತೆ ಗಣೇಶನನ್ನು ನಡು ರಸ್ತೆಯಲ್ಲಿಯೇ ಬಿಟ್ಟು ಸಂಘಟಕರು ಪರಾರಿಯಾಗಿದ್ದಾರೆ. ಇನ್ನೂ ಚಾಲಕ ಕುಡಿದ ಮತ್ತಿನಲ್ಲಿದ್ದ ಕಾರಣ ವಾಹನ ನಿಯಂತ್ರಣ ಮಾಡಲು ಸಾಧ್ಯವಾಗಿಲ್ಲ ಎನ್ನಲಾಗ್ತಿದೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಮಹಾಲಕ್ಷ್ಮೀಪುರ ಪೊಲೀಸ್ರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗಡೀಪಾರು ಸಂಕಷ್ಟದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ: ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಮಹಾಲಿಂಗೇಶ್ವರ್ ದೇಗುಲದ್ಲಿ ಪ್ರಾರ್ಥನೆ
ಅಧಿವೇಶನದ ಮೊದಲ ದಿನವೇ ಕೇಬಲ್‌ ಆಪರೇಟರ್‌ಗಳಿಗೆ ಸಿಹಿಸುದ್ದಿ ನೀಡಿದ ಇಂಧನ ಸಚಿವ ಕೆಜೆ ಜಾರ್ಜ್‌!