
ಹುಬ್ಬಳ್ಳಿ(ಅ.01): ಅವಮಾನಕರ ಲೇಖನ ಪ್ರಕಟಿಸಿದ ಆರೋಪದಡಿಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್'ರನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.
2007 ದರೋಡೆಗಿಳಿದ ಬಿಜೆಪಿಗಳು ಎಂಬ ತಲೆ ಬರಹದಡಿಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಲೇಖನವೊಂದು ಪ್ರಕಟವಾಗಿತ್ತು. ಈ ಸಂಬಂಧ ಬಿಜೆಪಿ ಸಂಸದ ಪ್ರಹ್ಲಾದ ಜೋಶಿ ಜಾತಿ ಮತ್ತೊಬ್ಬ ಮುಖಂಡ ಹಾಗೂ ಮತ್ತೊಬ್ಬ ಮುಖಂಡ ಉಮೇಶ್ ಜೋಶಿ ಎಂಬುವವರು ದೂರು ದಾಖಲಿಸಿದ್ದರು.
ಈ ಹಿನ್ನೆಲೆಯಲ್ಲಿ ಗೌರಿ ಲಂಕೇಶ್ ವಿರುದ್ಧ ಬಂಧನದ ವಾರೆಂಟ್ ಜಾರಿಯಾಗಿದ್ದು, ಇಂದು ಹುಬ್ಬಳ್ಳಿ ಪೊಲೀಸರು ಗೌರಿ ಲಂಕೇಶರನ್ನು ಬಂಧಿಸಿ ಹುಬ್ಬಳ್ಳಿಯ ಎರಡನೆಯ ಜೆ.ಎಂ.ಎಫ್ ಸಿ ಕೋರ್ಟ್'ಗೆ ಹಾಜರುಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.