
ಹುಬ್ಬಳ್ಳಿ(ನ. 28): ಮಾನನಷ್ಟ ಮೊಕದ್ದಮೆ ಪ್ರಕರಣವೊಂದರಲ್ಲಿ ಪತ್ರಕರ್ತೆ ಗೌರಿ ಲಂಕೇಶ್'ಗೆ 6 ತಿಂಗಳು ಜೈಲು ಶಿಕ್ಷೆಯಾಗಿದೆ. ಇಲ್ಲಿಯ ಜೆಎಂಎಫ್'ಸಿ ಎರಡನೇ ನ್ಯಾಯಾಲಯದ ನ್ಯಾಯಮೂರ್ತಿ ಡಿ.ಅಮರ್ ಅವರು ಈ ಆದೇಶ ಹೊರಡಿಸಿದ್ದಾರೆ. ಗೌರಿ ಲಂಕೇಶ್'ಗೆ 6 ತಿಂಗಳು ಜೈಲಿನ ಜೊತೆಗೆ 5 ಸಾವಿರ ರೂ ದಂಡವನ್ನೂ ವಿಧಿಸಲಾಗಿದೆ. ಆದರೆ, ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಗೌರಿ ಲಂಕೇಶ್ ಅವರು ಜಾಮೀನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಧಾರವಾಡದ ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ಮತ್ತಿತರರ ಬಗ್ಗೆ ಅವಹೇಳನಕಾರಿ ಲೇಖನ ಪ್ರಕಟಿಸಿದ ಆರೋಪ ಗೌರಿ ಲಂಕೇಶ್ ಮೇಲಿತ್ತು. 2008ರಲ್ಲಿ ಲಂಕೇಶ್ ಪತ್ರಿಕೆಯಲ್ಲಿ ಈ ಲೇಖನ ಪ್ರಕಟವಾಗಿತ್ತು. ಎಂಟು ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ನ್ಯಾಯಾಲಯ ಈ ತೀರ್ಪು ನೀಡಿದೆ.
ಸದ್ಯ ಜಾಮೀನು ಪಡೆದಿರುವ ಗೌರಿ ಲಂಕೇಶ್ ಅವರು ಕೆಳಹಂತದ ನ್ಯಾಯಾಲಯದ ತೀರ್ಪಿನ್ನು ಪ್ರಶ್ನಿಸಿ ಮೇಲ್ಮನವಿ ಹೋಗುವುದಾಗಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.