
ಬೆಂಗಳೂರು: ಗೌರಿ ಲಂಕೇಶ್ ಅವರ ಹಂತಕರ ಜಾಡು ಪತ್ತೆಗೆ ಹರಸಾಹಸ ಪಡುತ್ತಿರುವ ಎಸ್‌ಐಟಿ ತಂಡವು, ನಗರ ವ್ಯಾಪ್ತಿಯಲ್ಲಿ ಹತ್ಯೆಗೂ ಮುನ್ನ 7 ದಿನಗಳ ಅವಧಿಯ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಸಂಗ್ರಹಿಸಿ ಪರಿಶೀಲಿಸುತ್ತಿದೆ.
ಮೆಜೆಸ್ಟಿಕ್, ರೈಲ್ವೆ, ಮೆಟ್ರೋ ನಿಲ್ದಾಣಗಳು, ನಗರದ ಸಂಪರ್ಕಿಸುವ ಪ್ರಮುಖ ಹೆದ್ದಾರಿಗಳ ಟೋಲ್ ಗಳು ಸೇರಿದಂತೆ ಪ್ರಮುಖ ಜನ ಸಂಚಾರ ಪ್ರದೇಶಗಳ ಕಡೆಗೆ ಸಿಸಿಟಿವಿ ಕ್ಯಾಮೆರಾಗಳ ಡಿವಿಆರ್ ಪರೀಕ್ಷಿಸುತ್ತಿದ್ದಾರೆ.
ಈವರೆಗೆ ಹಂತಕರ ಸುಳಿವು ಬಗ್ಗೆ ನಿಖರವಾದ ಮಾಹಿತಿ ಲಭ್ಯವಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಗೌರಿ ಅವರ ಮನೆ ಸಿಸಿಟಿವಿಯಲ್ಲಿ ಆಗಂತುಕನ ಚಲನವನವು ಸೆರೆಯಾಗಿದ್ದು, ಆ ದೃಶ್ಯಾವಳಿಗಳಲ್ಲಿ ಆತನ ಚಹರೆ ಅಸ್ಪಷ್ಟವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.