
ಬೆಂಗಳೂರು : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚು ಶೋಧ ನಡೆಸಬೇಕಿದ್ದು, ರಾಜ್ಯ ಸರ್ಕಾರ ಆದಷ್ಟು ಬೇಗನೆ ಹಂತಕರ ಹಿಂದಿರುವ ಕೈಗಳನ್ನು ಪತ್ತೆ ಮಾಡಬೇಕು ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ನಗರದ ಟೌನ್‌ಹಾಲ್‌ನಲ್ಲಿ ಗೌರಿ ಸ್ಮಾರಕ ಟ್ರಸ್ಟ್ ಏರ್ಪಡಿಸಿದ್ದ ಪತ್ರಕರ್ತೆ ಗೌರಿ ಲಂಕೇಶ್ ಜನ್ಮದಿನ ‘ಗೌರಿ ದಿನ’ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ರಾಜ್ಯ ಸರ್ಕಾರ ಗೌರಿ ಲಂಕೇಶ್ ಹಂತಕರನ್ನು ಪತ್ತೆ ಮಾಡಲು ರಚಿಸಿರುವ ವಿಶೇಷ ತನಿಖಾ ದಳ (ಎಸ್‌ಐಟಿ) ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಇದೆ.
ಆದರೆ, ಎಸ್‌ಐಟಿ ಯಾರನ್ನು ಬಂಧಿಸಿದೆ ಎಂಬುದು ನನಗೆ ಗೊತ್ತಿಲ್ಲ. ಹೀಗಾಗಿ ದಕ್ಷಿಣಕನ್ನಡದಲ್ಲಿ ಇನ್ನಷ್ಟು ಆಳವಾಗಿ ತಪಾಸಣೆ ನಡೆಸಿದರೆ ಹಂತಕರ ಹಿಂದಿನ ಕೈಗಳು ಸಿಗಬಹುದು. ಪಿಸ್ತೂಲ್ ತಯಾರಿಸುವವರನ್ನು, ಪಿಸ್ತೂಲಿನಿಂದ ಗುಂಡು ಹಾರಿಸಿದವರನ್ನು ಬಂಧಿಸುವ ಬದಲಾಗಿ, ಗುಂಡು ಚಲಾಯಿಸಲು ಹೇಳಿದವರನ್ನು ಬಂಧಿಸ ಬೇಕಾಗಿದೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.