
ನವದೆಹಲಿ(ಜ.29): ಅಪ್ರತಿಮ ದೇಶ ಭಕ್ತ , ಹೋರಾಟಗಾರ ಹಾಗೂ ಧೀಮಂತ ರಾಜಕರಣಿ ಜಾರ್ಜ್ ಫರ್ನಾಂಡಿಸ್(88) ಇಂದು ಬೆಳಗ್ಗೆ ದೆಹಲಿಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಮಾಜಿ ರಕ್ಷಣಾ ಸಚಿವರಾಗಿ, ರೈಲ್ವೇ ಸಚಿವರಾಗಿ ಸೇವೆ ಸಲ್ಲಿಸಿರುವ ಜಾರ್ಜ್ ಫರ್ನಾಂಡಿಸ್ ನಿಧನದಿಂದ ದೇಶದ ಹಿರಿಯ ಕೊಂಡಿಯೊಂದು ಕಳಚಿದೆ.
ಇದನ್ನೂ ಓದಿ: ಮಂಗಳೂರು, ಮುಂಬೈ, ದೆಹಲಿ: ಜಾರ್ಜ್ ಹೆಜ್ಜೆಯ ಜಾಡು ಹುಡುಕುತ್ತಾ!
ಜೂನ್ 3, 1930ರಲ್ಲಿ ಮಂಗಳೂರಿನಲ್ಲಿ ಜನಿಸಿದ ಜಾರ್ಜ್ ಫರ್ನಾಂಡಿಸ್, 1950ರಲ್ಲಿ ಬಾಂಬೇ ಕಾರ್ಮಿಕ ಚಳುವಳಿಯೊಂದಿಗೆ ರಾಜಕೀಯ ನಾಯಕರಾಗಿ ಬೆಳೆದರು. ಹಿರಿಯ ರಾಜಕಾರಣಿಯ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಜಕೀಯ ಮುಖಂಡರು, ಗಣ್ಯರು ಸಂತಾಪ ಸೂಚಿಸಿದ್ದಾರೆ.
"
"
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.