
ನವದೆಹಲಿ: ಹೆಣ್ಣು ಮಕ್ಕಳನ್ನು ತಾತ್ಸಾರದಿಂದ ಕಾಣುವ ಕಾಲವೊಂದಿತ್ತು. ಆದರೆ, ಕಳೆದ ಆರು ವರ್ಷಗಳಲ್ಲಿ ದತ್ತು ಸ್ವೀಕರಿಸಿದ ಮಕ್ಕಳಲ್ಲಿ ಶೇ.60 ರಷ್ಟು ಮಂದಿ ಹೆಣ್ಣು ಮಕ್ಕಳಾಗಿದ್ದಾರೆ. ಹೆಣ್ಣು ಮಕ್ಕಳ ದತ್ತು ಸ್ವೀಕಾರದಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ ಎರಡನೇ ಸ್ಥಾನದಲ್ಲಿದೆ.
2017-18ರಲ್ಲಿ ಒಟ್ಟು 3,276 ಮಕ್ಕಳನ್ನು ದತ್ತು ಸ್ವೀಕಾರ ಮಾಡಲಾಗಿದೆ. ಅವರಲ್ಲಿ 1,858 ಮಂದಿ ಹೆಣ್ಣುಮಕ್ಕಳಾಗಿದ್ದಾರೆ ಎಂದು ಮಾಹಿತಿ ಹಕ್ಕು ಕಾಯ್ದೆಯ ಅಡಿಯಲ್ಲಿ ಸಲ್ಲಿಸಿದ್ದ ಅರ್ಜಿಗೆ ಮಕ್ಕಳ ದತ್ತು ಸಂಪನ್ಮೂಲ ಪ್ರಾಧಿಕಾರ ಉತ್ತರಿಸಿದೆ. ಮಕ್ಕಳ ದತ್ತು ಸ್ವೀಕಾರದಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು, 2017 ರಲ್ಲಿ ದತ್ತು ಸ್ವೀಕರಿಸಿದ 642 ಮಕ್ಕಳಲ್ಲಿ 353 ಮಂದಿ ಹೆಣ್ಣು ಮಕ್ಕಳಾಗಿದ್ದಾರೆ.
ಕರ್ನಾಟಕದಲ್ಲಿ 286 ಮಕ್ಕಳನ್ನು ದತ್ತು ಸ್ವೀಕರಿಸಲಾಗಿದ್ದು, ಅವರಲ್ಲಿ 167 ಹೆಣ್ಣು ಮಕ್ಕಳಿದ್ದಾರೆ. ಅಂತರ್ ರಾಷ್ಟ್ರೀಯ ದತ್ತು ಸ್ವೀಕಾರ ಪ್ರಮಾಣವೂ ಹೆಚ್ಚಳವಾಗಿದ್ದು, ಅಮೆರಿಕ, ಇಟಲಿ, ಫ್ರಾನ್ಸ್ ಮತ್ತು ಸ್ಪೇನ್‌ನ ಕುಟುಂಬಗಳು ಭಾರತದ ಮಕ್ಕಳನ್ನು ದತ್ತು ಪಡೆದಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.