
ಬೆಂಗಳೂರು(ಡಿ.10): ನಾಳೆ ಹಸೆಮಣೆ ಏರಬೇಕಿದ್ದ ನವ ವಧುವೊಬ್ಬಳು ಮದುವೆ ಮನೆಯಿಂದಲೇ ರಾತ್ರೋ ರಾತ್ರಿ ಪರಾರಿಯಾಗಿದ್ದಾಳೆ. ದ.ಕ ಜಿಲ್ಲೆಯ ಮೂಡಬಿದ್ರೆಯಲ್ಲಿ ಈ ಘಟನೆ ನಡೆದಿದ್ದು, ಮನೆಯವರು ಲವ್ ಜಿಹಾದ್ಗೆ ಯುವತಿ ಬಲಿಯಾಗಿದ್ದಾಳೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ನಿನ್ನೆ ಮನೆಯಲ್ಲಿ ಮೆಹಂದಿ ಕಾರ್ಯಕ್ರಮವಿತ್ತು. ಮುನ್ನಾ ದಿನ ಊಟದ ಬಳಿಕ ಜ್ಯೂಸ್ ನಲ್ಲಿ ಅಮಲು ಪದಾರ್ಥ ಸೇರಿಸಿ ಯುವತಿ ಮನೆಯವರಿಗೆ ಕೊಟ್ಟಿದ್ದಾಳೆ. ಬಳಿಕ ಅವರು ನಿದ್ದೆಗೆ ಜಾರುತ್ತಿದ್ದಂತೆ ಚಿನ್ನಾಭರಣ, ನಗದು ಮತ್ತು ಐಡಿ ಕಾರ್ಡ್ ದಾಖಲೆ ಸಹಿತ ಮದುವೆ ಮನೆಯಿಂದಲೇ ಪರಾರಿಯಾಗಿದ್ದಾಳೆ. ಯುವತಿಗೆ ವಿದೇಶದಲ್ಲಿರುವ ಯುವಕನೊಂದಿಗೆ ಮದುವೆ ನಿಶ್ಚಯವಾಗಿತ್ತು. ಈ ಬಗ್ಗೆ ಸಹೋದರ ಮೂಡು ಬಿದಿರೆ ಠಾಣೆಗೆ ದೂರು ನೀಡಿದ್ದಾರೆ.
ಯುವತಿ ಕೆಲ ದಿನಗಳ ಹಿಂದೆಯೇ ಪರಂಗಿಪೇಟೆ ನಿವಾಸಿ ಹೈದರ್ ಎಂಬಾತನ ಜೊತೆ ನಿಕಟ ಸಂಪರ್ಕ ಹೊಂದಿದ್ದು, ಇದು ಲವ್ ಜಿಹಾದ್ ಎಂದು ಮನೆಯವರು ಮತ್ತು ಹಿಂದೂ ಸಂಘಟನೆಗಳ ಮುಖಂಡರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪೊಲೀಸರು ಕ್ರಮ ಕೈಗೊಂಡು, ಸೂಕ್ತ ತನಿಖೆ ನಡೆಸದಿದ್ದರೇ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.