25 ವರ್ಷಗಳ ಬಳಿಕ ಮೊದಲ ಬಾರಿ ಪರಿಕ್ಕರ್ ಕ್ಷೇತ್ರ ಕೈ ವಶ

Published : May 23, 2019, 04:30 PM IST
25 ವರ್ಷಗಳ ಬಳಿಕ ಮೊದಲ ಬಾರಿ ಪರಿಕ್ಕರ್ ಕ್ಷೇತ್ರ ಕೈ ವಶ

ಸಾರಾಂಶ

ಕಳೆದ 25 ವರ್ಷಗಳ ಬಳಿಕ ಮೊದಲ ಬಾರಿಗೆ ಪಣಜಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಪಡೆದಿದ್ದು, ಬಿಜೆಪಿ ಸೋಲುವ ಮೂಲಕ ಇತಿಹಾಸವಾಗಿದೆ.  ಪರಿಕ್ಕರ್ ನಿಧನದಿಂದ ತೆರವಾಗಿದ್ದ ಕ್ಷೇತ್ರವೀಗ ಕೈವಶವಾಗಿದೆ. 

ಪಣಜಿ : ಗೋವಾ ಮುಖ್ಯಮಂತ್ರಿಯಾಗಿದ್ದ ಮನೋಹರ್ ಪರಕ್ಕರ್ ಅವರ ನಿಧನದಿಂದ ತೆರವಾಗಿದ್ದ ಪಣಜಿ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಪರಾಭವಗೊಂಡಿದೆ. ಕಳೆದ 25 ವರ್ಷಗಳಲ್ಲಿ ಮೊದಲ ಬಾರಿ ಪಣಜಿಯಲ್ಲಿ ಗೆಲುವು ಸಾಧಿಸಿದೆ. 

ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಗೋವಾದಲ್ಲಿ ಉಪ ಚುನಾವಣೆ ನಡೆದಿದ್ದು ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಮನೋಹರ್ ಪರಿಕ್ಕರ್ ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಸೋಲು ಕಂಡಿದೆ. 

ಪಣಜಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಟಾನಾಸಿಯೋ ಮೋನ್ಸರೆಟ್ಟೆ ಬಿಜೆಪಿ ಅಭ್ಯರ್ಥಿ ಸಿದ್ಧಾರ್ಥ್ ವಿರುದ್ಧ ಗೆಲುವು ಪಡೆದಿದ್ದಾರೆ. 

ಗೋವಾದಲ್ಲಿ 2017ರಲ್ಲಿ ಚುನಾವಣೆ ನಡೆದಿದ್ದು, ಪರಕ್ಕರ್ ನಿಧನದಿಂದ ಈ ಕ್ಷೇತ್ರ ತೆರವಾಗಿದ್ದು,  ಮೇ 19 ರಂದು ಚುನಾವಣೆ ನಡೆದಿತ್ತು. 1994ರಿಂದ ಈ ಕ್ಷೇತ್ರದಲ್ಲಿ ಬಿಜೆಪಿ ನಿರಂತರವಾಗಿ ಗೆಲುವು ಸಾಧಿಸುತ್ತಾ ಬಂದಿದ್ದು, ಮೊದಲ ಬಾರಿ ಕೈಗೆ ವಿಜಯ ಒಲಿದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿ: ಅಹವಾಲು ಹೇಳಲು ಚೇಂಬರ್‌ಗೆ ಬಂದ ರೈತರನ್ನು ಅವಮಾನಿಸಿದ ಸಚಿವ ಮಧು ಬಂಗಾರಪ್ಪ
ಜೀವ ವಿಮೆಗಾಗಿ ಜೀವ ತೆಗೆದ: ಲಿಫ್ಟ್ ಕೇಳಿದ್ದೇ ತಪ್ಪಾಯ್ತು: ಹಂತಕ ಸಿಕ್ಕಿಬಿದ್ದಿದ್ದು ಹೇಗೆ?