
ಮುಂಬೈ: ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ಮೆದೋಜೀರಕಾಂಗ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಎಂಬ ಕೆಲ ಮಾಧ್ಯಮಗಳ ವರದಿಯನ್ನು ಮುಂಬೈನ ಲೀಲಾವತಿ ಆಸ್ಪತ್ರೆ ಸ್ಪಷ್ಟವಾಗಿ ತಳ್ಳಿಹಾಕಿದೆ. ಈ ಬಗ್ಗೆ ಭಾನುವಾರ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ ಲೀಲಾವತಿ ಆಸ್ಪತ್ರೆ, ಪರ್ರಿಕರ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಶೀಘ್ರದಲ್ಲೇ ಗುಣಮುಖರಾಗಲಿದ್ದಾರೆ ಎಂದು ತಿಳಿಸಿದೆ.
ಅಲ್ಲದೆ, ಅವರು ಭಾರತ ಮತ್ತು ದಕ್ಷಿಣ ಆಫ್ರಿಕಾದ ಕ್ರಿಕೆಟ್ ಪಂದ್ಯವನ್ನು ವೀಕ್ಷಣೆ ಮಾಡಿದ್ದಾರೆ ಎಂದು ಪರ್ರಿಕರ್ ಅವರಿಗೆ ಚಿಕಿತ್ಸೆ ನೀಡಿದ ವೈದ್ಯ ಪಿ.ಜಗನ್ನಾಥ್ ತಿಳಿಸಿದ್ದಾರೆ. ಇನ್ನು ಈ ಬಗ್ಗೆ ಗೋವಾ ಮುಖ್ಯಮಂತ್ರಿ ಕಚೇರಿ ಟ್ವೀಟ್ ಮಾಡಿ, ‘ಮುಖ್ಯಮಂತ್ರಿ ಬಗ್ಗೆ ಹಲವು ಸುಳ್ಳು ಸುದ್ದಿಗಳು ಮತ್ತು ಅವರಿಗೆ ಅಪಚಾರ ಎಸಗುವ ವರದಿಗಳು ಎಲ್ಲೆಡೆ ಹರಿದಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಇವೆಲ್ಲವೂ ಸುಳ್ಳು ಸುದ್ದಿಗಳು,’ ಎಂದು ಉಲ್ಲೇಖಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.