
ಬೆಳಗಾವಿ: ಮಹದಾಯಿ ವಿಚಾರವಾಗಿ ಗೋವಾ ಸಿಎಂ ಮನೋಹರ್ ಪರ್ರಿಕರ್ ವಿರುದ್ಧ ಸಚಿವ ಎಂ.ಬಿ. ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.
ಗೋವಾ ಸಿಎಂ ಸಂವಿಧಾನಾತ್ಮಕವಾಗಿ ಸರ್ಕಾರಕ್ಕೆ ಪತ್ರ ಬರೆಯಬೇಕಿತ್ತು, ಆದರೆ ಯಡಿಯೂರಪ್ಪನವರಿಗೆ ಬರೆದಿದ್ದಾರೆ. ಗೋವಾ ಸಿಎಂ ಪರ್ರಿಕರ್ ಅವರದ್ದು ‘ಡರ್ಟಿ ಪಾಲಿಟಿಕ್ಸ್’ ಎಂದು ಸಚಿವ ಪಾಟೀಲ್ ಹೇಳಿದ್ದಾರೆ.
ಗೋವಾ ಚುನಾವಣೆಗೂ ಮುನ್ನ ಸಿದ್ದರಾಮಯ್ಯ ಗೋವಾ ಸಿಎಂಗೆ 2 ಸಲ ಪತ್ರ ಬರೆದಿದ್ದರು, ದರೆ ಅದಕ್ಕೆ ಗೋವಾ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಆ ಸಂದರ್ಭದಲ್ಲಿ ಗೋವಾ ನೀರಾವರಿ ಸಚಿವ ಪಾಲೇಕರ್ ಕರ್ನಾಟಕ ಸರ್ಕಾರದ ಕ್ರಮವನ್ನು ‘ಡರ್ಟಿ ಪಾಲಿಟಿಕ್ಸ್’ ಎಂದಿದ್ದರು.
ಅವರು ಪತ್ರದಲ್ಲಿ ಕೆಟ್ಟ ಶಬ್ದ ಬಳಸಿ ಸಿಎಂ ಸಿದ್ದರಾಮಯ್ಯಗೆ ಅವಮಾನ ಮಾಡಿದ್ದರು; ಈಗ ಗೋವಾ ಸಿಎಂ ಮಾಡುತ್ತಿರುವುದೂ ಡರ್ಟಿ ಪಾಲಿಟಿಕ್ಸ್, ಎಂದು ಬೆಳಗಾವಿಯಲ್ಲಿ ಜಲಸಂಪನ್ಮೂಲ ಸಚಿವ ಎಂ.ಟಿ. ಪಾಟೀಲ್ ತಿರುಗೇಟು ನೀಡಿದ್ದಾರೆ.
‘ಪ್ರತಿಷ್ಠೆ ಇಲ್ಲ, ಚರ್ಚೆಗೆ ಸಿದ್ಧ’
ಕರ್ನಾಟಕ ಸರ್ಕಾರದ ನಿಲುವು ಪ್ರಕಟಿಸಿದ ಸಚಿವ ಎಂ.ಬಿ. ಪಾಟೀಲ್, ರಾಜ್ಯದ ಜನ, ರೈತರ ಸಲುವಾಗಿ ಪ್ರತಿಷ್ಠೆ ಬದಿಗಿಟ್ಟು ಮಾತುಕತೆಗೆ ಸಿದ್ಧ. ಯಾವುದೇ ಸ್ಥಳ, ಯಾವುದೇ ದಿನಾಂಕದಂದು ಚರ್ಚಿಸಲು ಸಿದ್ಧವಿದ್ದೇವೆ. 2-3 ದಿನದಲ್ಲಿ ಸಭೆ ಕರೆಯಬೇಕೆಂದು ನಮ್ಮ ಕೋರಿಕೆ, ಸಿದ್ದರಾಮಯ್ಯ ಪೂರ್ವ ನಿಯೋಜಿತ ಕಾರ್ಯಕ್ರಮ ಬಿಟ್ಟು ಚರ್ಚೆಗೆ ಬರುತ್ತಾರೆ, ಎಂದು ಸಚಿವ ಪಾಟೀಲ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.