
ಪಣಜಿ(ನ.18): ಕುಂಟುತ್ತ ಸಾಗುತ್ತಿರುವ ಗೋವಾದಲ್ಲಿನ ಬಿಜೆಪಿ ಸರ್ಕಾರದಲ್ಲಿ ಪುನಃ ಒಡಕು ಸೃಷ್ಟಿಯಾಗಿದೆ. ‘ಅಸ್ವಾಸ್ಥ್ಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮನೋಹರ ಪರ್ರಿಕರ್ ರಾಜೀನಾಮೆ ನೀಡಬೇಕು. ಇಲ್ಲದೇ ಹೋದರೆ ಮುಂಬರುವ ಲೋಕಸಭೆ ಚುನಾವಣೆ ಹಾಗೂ ವಿಧಾನಸಭೆಯ 2 ಉಪಚುನಾವಣೆಗಳಲ್ಲಿ ಬಿಜೆಪಿ ವಿರುದ್ಧ ನಮ್ಮ ಪಕ್ಷ ಕಣಕ್ಕಿಳಿಯಲಿದೆ’ ಎಂದು ಸರ್ಕಾರದ ಪಾಲುದಾರ ಪಕ್ಷವಾದ ಮಹಾರಾಷ್ಟ್ರವಾದಿ ಗೋಮಾಂತಕ ಪಕ್ಷ (ಎಂಜಿಪಿ) ನಾಯಕ ದೀಪಕ್ ಧಾವಳೀಕರ್ ಎಚ್ಚರಿಸಿದ್ದಾರೆ.
ಇದೇ ವೇಳೆ ಸಿಎಂ ಹುದ್ದೆಯನ್ನು ತಮ್ಮ ಸೋದರ ಸುದಿನ್ ಧಾವಳೀಕರ್‌ಗೆ ಬಿಟ್ಟುಕೊಡಬೇಕು ಎಂದೂ ಆಗ್ರಹಿಸಿದ್ದಾರೆ. ಪಕ್ಷದ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಸಿಎಂ ಅಸ್ವಾಸ್ಥ್ಯದಿಂದ ಆಡಳಿತ ಯಂತ್ರಕ್ಕೆ ಹಾನಿಯಾಗಿದೆ. ಹೀಗಾಗಿ ಆಡಳಿತ ಯಂತ್ರ ಸುಲಲಿತವಾಗಿ ಸಾಗಲು ಸಿಎಂ ಬದಲಾವಣೆ ಮಾಡಲೇಬೇಕು’ ಎಂದು ಆಗ್ರಹಿಸಿದರು. ಒಂದು ವೇಳೆ ಪರ್ರಿಕರ್ ಬದಲಾವಣೆ ಮಾಡದೇ ಹೋದರೆ ಲೋಕಸಭೆ ಹಾಗೂ ಉಪಚುನಾವಣೆಗಳಲ್ಲಿ ಪಕ್ಷವು ಬಿಜೆಪಿ ವಿರುದ್ಧವೇ ಸ್ಪರ್ಧಿಸಲಿದೆ ಎಂದರು.
ಪರ್ರಿಕರ್ ಮೇದೋಜೀರಕ ಕ್ಯಾನ್ಸರ್’ಗೆ ತುತ್ತಾಗಿದ್ದು ದೆಹಲಿಯ ಏಮ್ಸ್’ನಲ್ಲಿ ಚಿಕಿತ್ಸೆ ಪಡೆದು ಗೋವಾಗೆ ಮರಳಿದ್ದಾರೆ. ಅಕ್ಟೋಬರ್ 14ರಂದು ಗೋವಾದ ತಮ್ಮ ಖಾಸಗಿ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಅವರು ಇದುವರೆಗೂ ಯಾವುದೇ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿಲ್ಲ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ