ವಿಶ್ವಾಸಮತ ಗೆದ್ದ ಸಿಎಂ: ಗೋವಾದಲ್ಲಿನ್ನು ಸಾವಂತ್ ರಾಜ್ಯಭಾರ!

Published : Mar 20, 2019, 05:20 PM IST
ವಿಶ್ವಾಸಮತ ಗೆದ್ದ ಸಿಎಂ: ಗೋವಾದಲ್ಲಿನ್ನು ಸಾವಂತ್ ರಾಜ್ಯಭಾರ!

ಸಾರಾಂಶ

ಗೋವಾ ಸಿಎಂ ಪ್ರಮೋದ್ ಸಾವಂತ್ ಗೆ ವಿಶ್ವಾಸಮತದಲ್ಲಿ ಗೆಲುವು| ವಿಧಾನಸಭೆಯಲ್ಲಿ ಇಂದು ನಡೆದ ವಿಶ್ವಾಸ ಮತಯಾಚನೆ| ಪ್ರಮೋದ್ ಸಾವಂತ್ ಸರ್ಕಾರಕ್ಕೆ 20 ಶಾಸಕರ ಬೆಂಬಲ|

ಪಣಜಿ(ಮಾ.20): ವಿಶ್ವಾಸಮತದ ಅಗ್ನಿ ಪರೀಕ್ಷೆಯಲ್ಲಿ ನೂತನ ಗೋವಾ ಸಿಎಂ ಪ್ರಮೋದ್ ಸಾವಂತ್ ಗೆಲುವು ಸಾಧಿಸಿದ್ದಾರೆ.

ಗೋವಾ ವಿಧಾನಸಭೆಯಲ್ಲಿ ಇಂದು ನಡೆದ ವಿಶ್ವಾಸ ಮತದಲ್ಲಿ, ಪ್ರಮೋದ್ ಸಾವಂತ್ ಸರ್ಕಾರಕ್ಕೆ 20 ಶಾಸಕರು ಬೆಂಬಲ ಘೋಷಣೆ ಮಾಡಿದ್ದಾರೆ. ಈ ಮೂಲಕ ಪ್ರಮೋದ್ ಸಾವಂತ್ ನೇತೃತ್ವದ ಬಿಜೆಪಿ ಸರ್ಕಾರ ಸುಭದ್ರವಾಗಿದೆ.

ಬಿಜೆಪಿ ನೇತೃತ್ವ ಮೈತ್ರಿಕೂಟಕ್ಕೆ ಒಟ್ಟು 20 ಶಾಸಕರು ಬೆಂಬಲ ನೀಡಿದ್ದು, ಬಿಜೆಪಿಯ 11, ಮಿತ್ರಪಕ್ಷಗಳಾದ ಜಿಎಫ್ ಪಿ, ಎಂಜಿಪಿಯ ತಲಾ ಮೂರು ಶಾಸಕರು ಮತ್ತು 3 ಪಕ್ಷೇತರ ಶಾಸಕರು ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ. 

ಇನ್ನು ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಬಿಜೆಪಿ ಶಾಸಕ ಪಾಂಡುರಂಗ ಮಡ್ಕೈಕರ್ ವಿಶ್ವಾಸಮತ ಯಾಚನೆಗೆ ಗೈರಾಗಿದ್ದರು. 40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ ಇದೀಗ 36 ಮಂದಿ ಶಾಸಕರಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನ್ಯಾಯಾಂಗ ಬೆದರಿಸಿ ಶತಮಾನಗಳ ಕಾರ್ತಿಕ ದೀಪ ಸಂಪ್ರದಾಯ ಮುಗಿಸಲು ಡಿಎಂಕೆ ಯತ್ನ ಬಹಿರಂಗ
ಕೇಂದ್ರದಿಂದ MNREGA ಹೆಸರು ಬದಲಾವಣೆ, ಹೊಸ ನಿಯಮಗಳು ಜಾರಿ, ಕೆಲಸದ ಅವಧಿ, ಕನಿಷ್ಟ ವೇತನ ಹೆಚ್ಚಳ, ವಿವರವಾಗಿ ತಿಳಿಯಿರಿ