
ಪಣಜಿ: ಮಹದಾಯಿ ನದಿ ನೀರು ಹಂಚಿಕೆ ವಿವಾದ ಕುರಿತಂತೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸೋಮವಾರ ಇಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮಕ್ಕೆ ಗೋವಾ ಸಿಎಂ ಮನೋಹರ್ ಪರ್ರಿಕರ್ ಸೇರಿದಂತೆ ಬಹುತೇಕ ಶಾಸಕರು ಗೈರಾಗಿದ್ದರು.
ಗೋವಾ ವಿಧಾನಸಭೆ ವತಿಯಿಂದ ಆಯೋಜಿತ ವಾಗಿದ್ದ ಈ ಕಾರ್ಯಕ್ರಮದಲ್ಲಿ 40 ಶಾಸಕರಲ್ಲಿ ಕೇವಲ ಆರು ಮಂದಿ ಮಾತ್ರ ಭಾಗವಹಿಸಿದ್ದರು. ಮಹದಾಯಿ ಬಚಾವೊ ಅಭಿಯಾನದ ನಾಯಕ ರಾಜೇಂದ್ರ ಕೆರ್ಕರ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಸ್ವತಃ ಗೋವಾ ನೀರಾವರಿ ಸಚಿವರೂ ಕಾರ್ಯಕ್ರಮದಿಂದ ಗೈರಾಗಿದ್ದರು. ಸಚಿವರು ಸೇರಿ ಎಲ್ಲ ಶಾಸಕರಿಗೂ ನಾವು ಆಹ್ವಾನಿಸಿದ್ದೆವು. ಆದರೆ, ಶಾಸಕರು ಭಾಗವಹಿಸದಿರುವುದು, ವಿಷಯಕ್ಕೆ ಸಂಬಂಧಿಸಿ ಅವರು ಗಂಭೀರವಾಗಿಲ್ಲ ಎಂಬುದನ್ನು ತೋರಿಸುತ್ತದೆ. ತಮ್ಮ ಪಕ್ಷ ಕರ್ನಾಟಕದಲ್ಲಿ ಗೆಲ್ಲಬೇಕೆಂಬ ಉದ್ದೇಶದಿಂದ ಗೋವಾ ಸರ್ಕಾರ ವಿವಾದಕ್ಕೆ ಸಂಬಂಧಿಸಿ ರಾಜ್ಯದ ಹಿತಾಸಕ್ತಿಯಲ್ಲಿ ರಾಜಿ ಮಾಡಿಕೊಳ್ಳಕೂಡದು ಎಂದು ಅವರು ಪ್ರತಿಪಾದಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.