ಪಂಜಾಬ್, ಗೋವಾ ವಿಧಾನಸಭೆ ಚುನಾವಣೆಯಲ್ಲಿ ದಾಖಲೆಯ ಮತದಾನ

Published : Feb 05, 2017, 03:04 AM ISTUpdated : Apr 11, 2018, 12:51 PM IST
ಪಂಜಾಬ್, ಗೋವಾ ವಿಧಾನಸಭೆ ಚುನಾವಣೆಯಲ್ಲಿ ದಾಖಲೆಯ ಮತದಾನ

ಸಾರಾಂಶ

ಪಂಜಾಬ್‌'ನ 117 ಮತ್ತು ಗೋವಾದ 40 ವಿಧಾನಸಭಾ ಕ್ಷೇತ್ರಗಳಿಗೆ ನಿನ್ನೆ ಒಂದೇ ಹಂತದಲ್ಲಿ ಶಾಂತಿಯುತ ಮತದಾನ ನಡೆಯಿತು. ಗೋವಾದಲ್ಲಿ ದಾಖಲೆಯ ಶೇ 83 ರಷ್ಟು ಮತ್ತು ಪಂಜಾಬ್‌'ನಲ್ಲಿ ಶೇ 75ರಷ್ಟು ಮತದಾನವಾಗಿದೆ.

ನವದೆಹಲಿ(ಫೆ.05): ಪಂಜಾಬ್‌'ನ 117 ಮತ್ತು ಗೋವಾದ 40 ವಿಧಾನಸಭಾ ಕ್ಷೇತ್ರಗಳಿಗೆ ನಿನ್ನೆ ಒಂದೇ ಹಂತದಲ್ಲಿ ಶಾಂತಿಯುತ ಮತದಾನ ನಡೆಯಿತು. ಗೋವಾದಲ್ಲಿ ದಾಖಲೆಯ ಶೇ 83 ರಷ್ಟು ಮತ್ತು ಪಂಜಾಬ್‌'ನಲ್ಲಿ ಶೇ 75ರಷ್ಟು ಮತದಾನವಾಗಿದೆ.

ಗೋವಾದಲ್ಲಿ ಮತದಾನ ಶಾಂತಿಯುತವಾಗಿ ನಡೆದಿದ್ದರೆ, ಪಂಜಾಬ್‌'ನ ಹಲವೆಡೆ ವಿವಿಧ ಪಕ್ಷಗಳ ಕಾರ್ಯಕರ್ತರ ನಡುವೆ ಸಂಘರ್ಷ ನಡೆದಿದೆ. ಈ ಎರಡೂ ರಾಜ್ಯಗಳಲ್ಲಿ ಸರಾಸರಿ ಶೇ.76ರಷ್ಟು ಮತದಾನವಾಗಿದೆ.   ಪಂಜಾಬ್‌ನ 1,145 ಅಭ್ಯರ್ಥಿಗಳು ಗೋವಾದ  250 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ನಿರ್ಧರಿಸಿದ್ದು, ಮತಪಟ್ಟಿಗೆಗಳನ್ನು ಸ್ಟ್ರಾಂಗ್‌ ರೂಂನಲ್ಲಿ ಇರಿಸಲಾಗಿದೆ.

2012ರ ಪಂಜಾಬ್‌ ವಿಧಾನಸಭಾ ಚುನಾವಣೆಯಲ್ಲಿ ಶೇ 79ರಷ್ಟು ಜನರು ಮತ ಚಲಾಯಿಸಿದ್ದರು. ಆದರೆ, ಈ ಬಾರಿ ಶೇ 75ರಷ್ಟು ಜನ ಮಾತ್ರ ಮತ ಚಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗ ಹೇಳಿದೆ. ಮಾರ್ಚ್ 11ರಂದು ವಿದಾನಸಭಾ ಚುನಾವಣಾ ಫಲಿಂತಾಶ ಹೊರಬೀಳಲಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಹೂದಿಗಳ 'ಬೆಳಕಿನ ಹಬ್ಬ'ದಂದೇ ಭಯೋತ್ಪಾದಕ ದಾಳಿ! ಹನುಕ್ಕಾ ಫೆಸ್ಟಿವಲ್ ಮಹತ್ವ, ಇತಿಹಾಸ ತಿಳಿಯಿರಿ
ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ, ವಿವಿಐಪಿಗೆ ಐದು ಹೆಲಿಪ್ಯಾಡ್ ವ್ಯವಸ್ಥೆ!