
ಬೆಂಗಳೂರು, [ಅ.03]: ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ರಾಮಚಂದ್ರಾಪುರದಿಂದ ಹಸ್ತಾಂತರ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಮಹತ್ವದ ಆದೇಶವೊಂದನ್ನು ಹೊರಡಿಸಿದೆ.
ವಿಚಾರಣೆ ಮುಗಿಯುವವರೆಗೂ ದೇವಾಲಯ ಮಠದ ಸುಪರ್ದಿಯಲ್ಲೇ ಇರಲಿ ಎಂದು ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠ ಇಂದು ಮಹತ್ವದ ಆದೇಶ ನೀಡಿದೆ. ಇದ್ರಿಂದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ.
"
ಗೋಕರ್ಣ ದೇಗುಲ ಶೀಘ್ರ ಸರ್ಕಾರದ ಸುಪರ್ದಿ ಸಂಭವ
ದೇವಸ್ಥಾನವನ್ನು ಸರ್ಕಾರಕ್ಕೆ ಹಸ್ತಾಂತರಿಸುವ ಆದೇಶವನ್ನು ರದ್ದುಗೊಳಿಸಿದ್ದು, ಸೆಪ್ಟೆಂಬರ್ 7ರ ಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ವಿಚಾರಣೆ ಮುಗಿಯುವವರೆಗೆ ದೇಗುಲ ಉಸ್ತುವಾರಿ ಸಮಿತಿ ಕೂಡ ರದ್ದುಗೊಳಿಸಿದ್ದು, ಮುಂದಿನ ಆದೇಶದವರೆಗೂ ಇದೇ ಸ್ಥಿತಿ ಇರಲಿ ಎಂದ ನ್ಯಾಯಮೂರ್ತಿ ಕುರಿಯನ್ ಜೋಸಫ್ ಮತ್ತು ಎ ಎಂ ಖಾನ್ವೀಳ್ಕರ್ ಆದೇಶಿಸಿದ್ದಾರೆ.
ಗೋಕರ್ಣ ದೇಗುಲವನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ರಾಮಚಂದ್ರಾಪುರ ಮಠ ಸುಪ್ರೀಂ ಕೋರ್ಟ್ ಮೇಟ್ಟಿಲೇರಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.