ಚಿನ್ನ ಕೊಳ್ಳುವವರಿಗೆ ಶುಭ ಸುದ್ದಿ

By Suvarna Web DeskFirst Published Apr 12, 2018, 11:13 AM IST
Highlights

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಏರಿಳಿತವಾಗುತ್ತಲೇ ಇರುತ್ತದೆ. ಇದೀಗ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಕುಸಿದ ಹಿನ್ನೆಲೆಯಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ.

ನವದೆಹಲಿ : ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಏರಿಳಿತವಾಗುತ್ತಲೇ ಇರುತ್ತದೆ. ಇದೀಗ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಕುಸಿದ ಹಿನ್ನೆಲೆಯಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. 10 ಗ್ರಾಂ ಚಿನ್ನಕ್ಕೆ 75 ರು. ಗಳಷ್ಟು ಇಳಿಕೆಯಾಗಿದ್ದು, ಇದರಿಂದ ಮಾರುಕಟ್ಟೆಯಲ್ಲಿ 10 ಗ್ರಾಂ ಚಿನ್ನಕ್ಕೆ 31,280 ರು.ಗಳಾಗಿದೆ.

ಸ್ಥಳೀಯ ಮಾರುಕಟ್ಟೆಗಳಲ್ಲಿ ಇದರಿಂದ ಬಂಗಾರದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಇದರಿಂದ ಚಿನ್ನದ ಬೆಲೆಯಲ್ಲಿ ಶೇ.0.24ರಷ್ಟು ಇಳಿಕೆಯಾದಂತಾಗಿದೆ. ಒಂದು ವಾರದಲ್ಲಿ ಜಾಗತಿಕವಾಗಿ ಚಿನ್ನದ ಬೇಡಿಕೆ ಕುಸಿದಿರುವುದೇ ಬೆಲೆ ಇಳಿಕೆಗೆ ಪ್ರಮುಖ ಕಾರಣವಾಗಿದೆ.

ಸದ್ಯ ಇನ್ನು ಬೆಳ್ಳಿಯ ದರದಲ್ಲಿಯೂ ಕೂಡ ಮಾರುಕಟ್ಟೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಏರಿಳಿತ ಕಂಡು ಬರುತ್ತಿದೆ.

click me!