
ಹೈದರಾಬಾದ್: ದಾಖಲೆ ಇಲ್ಲದ ಚಿನ್ನಾಭರಣಗಳನ್ನು ಬೆಂಗಳೂರು ಮತ್ತು ಮೈಸೂರಿನಲ್ಲಿ ಮಾರಾಟ ಮಾಡಲು ಮುಂದಾಗಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಹೈದರಾಬಾದ್ ಪೊಲೀಸರು ಯಶಸ್ವಿಯಾಗಿದ್ದಾರೆ.
ಆರೋಪಿಗಳಿಂದ ಗಳಿಲ್ಲದ 5 ಕೋಟಿ ರು. ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದ್ದು, ಈ ಪ್ರಕರಣದ ಮುಂದಿನ ತನಿಖೆಗಾಗಿ ಈ ಚಿನ್ನಾಭರಣವನ್ನು ಆದಾಯ ತೆರಿಗೆ ಇಲಾಖೆಗೆ ರವಾನಿಸಲಾಗಿದೆ ಎಂದು ಹೈದರಾಬಾದ್ ಪೊಲೀಸ್ ಆಯುಕ್ತ ವಿ.ವಿ.ಶ್ರೀನಿವಾಸ್ ರಾವ್ ತಿಳಿಸಿದ್ದಾರೆ.
ಈ ಬಗ್ಗೆ ಮಂಗಳವಾರ ಮಾತನಾಡಿದ ಹೈದರಾಬಾದ್ ಪೊಲೀಸ್ ಆಯುಕ್ತ ರಾವ್, ‘ಆಭರಣ ಮಳಿಗೆಯೊಂದರ ಮಾಲೀಕ ಯಶಸ್ವಿ ಅಗರ್ವಾಲ್ ಎಂಬುವರು ಚಿನ್ನಾಭರಣಗಳನ್ನು ಬೆಂಗಳೂರು ಮತ್ತು ಮೈಸೂರಿನಲ್ಲಿ ಮಾರಾಟ ಮಾಡುವಂತೆ ತಿಳಿಸಿ ತನ್ನ ನೌಕರರಾದ ವೈಷ್ಣವ್ ಎಂ.ಕೆ. ಮತ್ತು ಪ್ರದೀಪ್ ಎಂಬುವರಿಗೆ ನೀಡಿದ್ದ. ಅವುಗಳ ಜತೆಗೆ ತೆರಳುತ್ತಿದ್ದ ವೇಳೆ ತಪಾಸಣೆಗಾಗಿ ಅವರ ವಾಹನವನ್ನು ಪೊಲೀಸರು ಅಡ್ಡಗಟ್ಟಿದ್ದರು.
ಆದರೆ, ಆರೋಪಿಗಳು ವಾಹನ ನಿಲ್ಲಿಸದೇ ಪರಾರಿಯಾಗಿದ್ದರು. ಬಳಿಕ ಕಾರ್ಯಾಚರಣೆ ಕೈಗೊಂಡು ಅವರನ್ನು ಸೆರೆ ಹಿಡಿಯಲಾಗಿದೆ,’ ಎಂದು ತಿಳಿಸಿದ್ದಾರೆ. ಆರೋಪಿಗಳು ಆ ಚಿನ್ನಾಭರಣಗಳನ್ನು ಮಾರಾಟ ಮಾಡಲು ಕೊಂಡೊಯ್ಯುತ್ತಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.