
ನವದೆಹಲಿ: ಕರ್ನಾಟಕ ಚುನಾವಣೆ ಹತ್ತಿರವಾಗುತ್ತಿ ದ್ದಂತೆಯೇ ಕೇಂದ್ರ ಸರ್ಕಾರವು ಬೆಂಗಳೂರಿಗೆ ಮೆಗಾ ಸಬರ್ಬನ್ ರೈಲು ಯೋಜನೆಯ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ.ಈಗ ಇರುವ ರೈಲು ಮಾರ್ಗಗಳ ಜತೆ 170 ಕಿ.ಮೀ. ಎತ್ತರಿಸಿದ (ಎಲಿವೇಟೆಡ್) ರೈಲು ಮಾರ್ಗಗಳ ನಿರ್ಮಾ ಣವು ಈ ಪ್ರಸ್ತಾವನೆಯಲ್ಲಿನ ಪ್ರಮುಖ ಅಂಶವಾಗಿದೆ.
ಬೈಯ್ಯಪ್ಪನಹಳ್ಳಿ ಹಾಗೂ ಸಂಗೊಳ್ಳಿ ರಾಯಣ್ಣ ಬೆಂಗಳೂರು ಸಿಟಿ ರೈಲು ನಿಲ್ದಾಣಗಳನ್ನು ವಿಶ್ವದರ್ಜೆಗೆ ಏರಿಸುವುದು, ಬಾಣಸವಾಡಿ, ಯಲಹಂಕ, ಯಶವಂತ ಪುರ, ಕೆಂಗೇರಿ, ಕಾಕ್ಸ್ಟೌನ್, ಮಲ್ಲೇಶ್ವರ, ರಾಮನಗರ, ವೈಟ್‌ಫೀಲ್ಡ್, ದೊಡ್ಡಬಳ್ಳಾಪುರ ಹಾಗೂ ನೆಲಮಂಗಲ ರೈಲು ನಿಲ್ದಾಣಗಳನ್ನು ಆಧುನೀಕರಣಗೊಳಿಸುವುದೂ ಇದರಲ್ಲಿ ಸೇರಿದೆ. ಎಲಿವೇಟೆಡ್ ರೈಲು ಮಾರ್ಗದಲ್ಲಿ ವೇಗದ ರೈಲುಗಳನ್ನು ಓಡಿಸಬಹುದಾಗಿದೆ.
ಗಂಟೆಗೆ 90ರಿಂದ 125 ಕಿ.ಮೀ. ವೇಗದಲ್ಲಿ ರೈಲುಗಳನ್ನು ಓಡಿಸುವ ಪ್ರಸ್ತಾಪವಿದೆ. ಯೋಜನೆಯ ವೆಚ್ಚ ಸುಮಾರು 10ರಿಂದ 12 ಸಾವಿರ ಕೋಟಿ ರು. ಆಗಬಹುದು. ಖಾಸಗಿ-ಸಾರ್ವಜನಿಕ ಸಹಭಾಗಿತ್ವದಲ್ಲಿ ಯೋಜನೆ ಕೈಗೊಳ್ಳಲಾಗುತ್ತದೆ. ರಾಜ್ಯ ಸರ್ಕಾರಕ್ಕೂ ಸಹಭಾಗಿತ್ವ ವಹಿಸಲು ಹಾಗೂ ಅಗತ್ಯ ಜಮೀನು ಒದಗಿಸಲು ಕೋರಲಾಗುತ್ತದೆ ಎಂದು ಮೂಲಗಳು ಹೇಳಿವೆ. ‘ಬಜೆಟ್‌ನಲ್ಲಿ ಈ ಯೋಜನೆ ಘೋಷಣೆ ಆಗದುಎಂದೂರೈಲ್ವೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.