ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ..?

First Published Jun 16, 2018, 8:29 AM IST
Highlights

ರಾಜ್ಯ ಸರ್ಕಾರಿ ನೌಕರರಿಗೆ ಶೇ.1.75ರಷ್ಟುತುಟ್ಟಿಭತ್ಯೆ ಹೆಚ್ಚಿಸಲು ಸರ್ಕಾರ ಸಮ್ಮತಿಸಿದ್ದು, ಸದ್ಯದಲ್ಲೇ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ.

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಶೇ.1.75ರಷ್ಟುತುಟ್ಟಿಭತ್ಯೆ ಹೆಚ್ಚಿಸಲು ಸರ್ಕಾರ ಸಮ್ಮತಿಸಿದ್ದು, ಸದ್ಯದಲ್ಲೇ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ.

ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಿಸಿರುವ ಮಾದರಿಯಲ್ಲೇ, ಪ್ರಸಕ್ತ ವರ್ಷದ ಜನವರಿ 1ರಿಂದಲೇ ಪೂರ್ವಾನ್ವಯವಾಗುವಂತೆ ರಾಜ್ಯ ಸರ್ಕಾರಿ ನೌಕರರಿಗೂ ಶೇ.1.75ರಷ್ಟುತುಟ್ಟಿಭತ್ಯೆ ಹೆಚ್ಚಿಸಲು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದ್ದು, ಸೋಮವಾರ ಈ ಸಂಬಂಧ ಅಧಿಕೃತ ಆದೇಶ ಹೊರಬೀಳುವ ನಿರೀಕ್ಷೆಯಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೂ ತುಟ್ಟಿಭತ್ಯೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿತ್ತು. ತಮ್ಮ ಮನವಿ ಪುರಸ್ಕರಿಸಿರುವ ಮುಖ್ಯಮಂತ್ರಿ ಅವರಿಗೆ ಸಂಘ ಧನ್ಯವಾದ ಸಲ್ಲಿಸುವುದಾಗಿ ಸಂಘದ ಅಧ್ಯಕ್ಷ ಎಚ್‌.ಕೆ.ರಾಮು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

click me!