ಭಾರತೀಯ ರೈಲ್ವೆ ಮಂಡಳಿಯಿಂದ ಪರಿಕ್ಷಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್

By Suvarna Web DeskFirst Published Mar 3, 2018, 8:00 AM IST
Highlights

ರೈಲ್ವೆ ಇಲಾಖೆ 89 ಸಾವಿರ ಹುದ್ದೆಗಳ ಭರ್ತಿಗಾಗಿ ಬೃಹತ್‌ ನೇಮಕ ಪ್ರಕ್ರಿಯೆ ಆರಂಭಿಸಿದ್ದು, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಪರೀಕ್ಷಾ ಶುಲ್ಕ ಹಿಂದಿರುಗಿಸಲಿದೆ.

ನವದೆಹಲಿ: ರೈಲ್ವೆ ಇಲಾಖೆ 89 ಸಾವಿರ ಹುದ್ದೆಗಳ ಭರ್ತಿಗಾಗಿ ಬೃಹತ್‌ ನೇಮಕ ಪ್ರಕ್ರಿಯೆ ಆರಂಭಿಸಿದ್ದು, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಪರೀಕ್ಷಾ ಶುಲ್ಕ ಹಿಂದಿರುಗಿಸಲಿದೆ.

ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕವನ್ನು 500 ರು. ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 250 ರು. ಪರೀಕ್ಷಾ ಶುಲ್ಕ ನಿಗದಿ ಮಾಡಲಾಗಿದೆ.

ಪರೀಕ್ಷೆಗೆ ಹಾಜರಾದ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 400 ರು. ಮರಳಿಸಲಾಗುತ್ತದೆ. ಇನ್ನು ಎಸ್‌ಸಿ/ಎಸ್‌ಟಿ ವರ್ಗದವರಿಗೆ ಸಂಪೂರ್ಣ ಶುಲ್ಕ ಹಿಂದಿರುಗಿಸಲಾಗುತ್ತದೆ.

ಅಲ್ಲದೇ ಕನ್ನಡ ಸೇರಿದಂತೆ 15 ಭಾಷೆಗಳಲ್ಲಿ ಕಂಪ್ಯೂಟರ್‌ ಆಧಾರಿತ ನೇಮಕ ಪರೀಕ್ಷೆ ನಡೆಸಲು ನಿರ್ಧರಿಸಿದ್ದು, ಸಂದರ್ಶನ ಪ್ರಕ್ರಿಯೆ ಇರುವುದಿಲ್ಲ. ಜೊತೆಗೆ ವಿವಿಧ ವಿಭಾಗಳಿಗೆ ಗರಿಷ್ಠ ವಯಸ್ಸಿನ ಮಿತಿಯನ್ನು 2 ವರ್ಷ ವಿಸ್ತರಿಸಲಾಗಿದೆ.

click me!